NEWSದೇಶ-ವಿದೇಶನಮ್ಮರಾಜ್ಯ

ರಾಜ್ಯ ಹೈಕೋರ್ಟ್‌ಗೆ ನಾಲ್ವರು ಕಾಯಂ ನ್ಯಾಯಾಧೀಶರ ನೇಮಕ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕ ಹೈಕೋರ್ಟ್‌ನ ನಾಲ್ವರು ಹೆಚ್ಚುವರಿ ನ್ಯಾಯಾಧೀಶರನ್ನು ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

ರಾಜ್ಯ ಹೈಕೋರ್ಟ್ ನ ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಹೆಚ್ಚುವರಿ ನ್ಯಾಯಾಧೀಶರೆಂದರೆ ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್‌ ಕೃಷ್ಣಕುಮಾರ್‌, ಅಶೋಕ್‌ ಸುಭಾಷ್‌ಚಂದ್ರ ಕಿಣಗಿ, ಸೂರಜ್‌ ಗೋವಿಂದರಾಜ್‌ ಮತ್ತು ಸಚಿನ್‌ ಶಂಕರ್‌ ಮಗದಂ.

2020 ರ ಡಿಸೆಂಬರ್ 16 ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಕೊಲೆಜಿಯಂ ಈ ಪ್ರಸ್ತಾಪವನ್ನು ಅಂಗೀಕರಿಸಿತ್ತು. ಇದನ್ನು ಬುಧವಾರ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಬೊಬ್ಡೆ ಜತೆಗೆ ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಆರ್.ಎಫ್. ನಾರಿಮನ್, ಯು.ಯು. ಲಲಿತ್ ಮತ್ತು ಎ.ಎಂ. ಖಾನ್ವಿಲ್ಕರ್ ಅವರು ಕೊಲೆಜಿಯಂನ ಭಾಗವಾಗಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ