NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಗ್ರಾಮೀಣ ಭಾಗದಲ್ಲಿ  ಉಚಿತವಾಗಿ ಮರಳು ತೆಗೆಯಲು ಅವಕಾಶ: ಸಚಿವ ಮುರುಗೇಶ್ ನಿರಾಣಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡುವ ಉದ್ದೇಶದಿಂದ ಹೊಸ ಮರಳು ನೀತಿ ಪ್ರಕಟಿಸಲಾಗುವುದು ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಮತ್ತು ಇತರ ಸಣ್ಣಪುಟ್ಟ ವಸತಿ ಯೋಜನೆಗಳಿಗೆ ಅನುಕೂಲವಾಗುತ್ತದೆ. ಜತೆಗೆ ಪ್ರತಿಯೊಬ್ಬರಿಗೂ ಸುಲಭವಾಗಿ ಮತ್ತು ಕಡಿಮೆ ದರದಲ್ಲಿ ಮರಳು ಸಿಗಬೇಕು ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಬೇಕು ಎಂಬ ಸರ್ಕಾರ ಉದ್ದೇಶ ಹೊಂದಿದ್ದು, ಈ ಹಿನ್ನೆಲರಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದರು.

ಈ ರೀತಿ ತೆಗೆದ ಮರಳನ್ನು ಸ್ವಂತ ಮನೆ ಅಥವಾ ಕಟ್ಟಡಗಳಿಗೆ ಮಾತ್ರ ಉಪಯೋಗಿಸಬೇಕು. ಅದನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆ ವ್ಯಾಪ್ತಿಯಲ್ಲಿ ಎತ್ತಿನ ಬಂಡಿ ಕತ್ತೆಗಳ ಮೇಲೆ ಮಾತ್ರ ಸಾಗಿಸಬಹುದು. ಹೊರ ಜಿಲ್ಲೆಗಳಿಗೆ ಸಾಗಿಸುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ಇನ್ನು ಮರಳು ಗಣಿಗಾರಿಕೆಗೆ ನಿಗದಿಮಾಡಿದ ಪ್ರದೇಶ ಬಿಟ್ಟು ಬೇರೆ ಕಡೆಯಲ್ಲಿ ಮರಳು ಪಡೆಯಬಹುದು ಆದರೆ ಮರಳನ್ನು ಸಂಗ್ರಹಿಸುವಂತಿಲ್ಲ ಮತ್ತು ಮಾರುವುದಕ್ಕೆ ಅವಕಾಶವಿಲ್ಲ. ಸಾಮಾನ್ಯರಿಗೆ ಮರಳು ಸಿಗುತ್ತಿರಲಿಲ್ಲ. ಮನೆಗಳಿಗೂ ಸಿಗುತ್ತಿರಲಿಲ್ಲ ಇನ್ನು ಮುಂದೆ ಈ ರೀತಿ ಆಗದೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಹೇಳಿದರು.

ಹೊಸ ಮರಳು ನೀತಿ ಜಾರಿ ಮಾಡಲು ಕರಡು ನೀತಿಯನ್ನು ಸಿದ್ದಪಡಿಸಲಾಗಿದೆ. ಅಧಿಕಾರಿಗಳ ಜೊತೆ ಮತ್ತೊಮ್ಮೆ ಚರ್ಚಿಸಿ ಪ್ರಕಟಿಸಲಾಗುವುದು ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಮತ್ತು ಮಧ್ಯಕರ್ನಾಟಕ ಸೇರಿ ಪ್ರತಿಯೊಂದು ಭಾಗಕ್ಕೂ ಪ್ರತ್ಯೇಕ ಮರಳು ನೀತಿ ಇದೆ, ಈಗಾಗಲೇ ಒಂದು ಕರಡು ತಂದಿದ್ದೇವೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 183 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅವಕಾಶ ನೀಡಲಾಗುವುದು. ಪ್ರತಿಟನ್ ಮರಳು ತೆಗೆಯಲು 300 ರೂ. ನಿಗದಿ ಮಾಡಲಾಗುವುದು. ಟಿಪ್ಪರ್ ಲಾರಿ ಸೇರಿದಂತೆ ಮತ್ತಿತರ ವಾಹನಗಳಲ್ಲಿ ಸಾಗಣೆ ಮಾಡಬಹುದು. ಇದರ ಮೇಲೆ ಶುಲ್ಕವನ್ನು ವಿಧಿಸಲಾಗುವುದು. ಜಿಲ್ಲೆಯಲ್ಲಿ ಮಾರಾಟ ಮಾಡಬಹುದು. ಆದರೆ ಹೊರದೇಶಗಳಿಗೆ ಸಾಗಿಸುವಂತಿಲ್ಲ ಎಂದರು.

ಆಂಧ್ರಪ್ರದೇಶದಲ್ಲಿ ಮರಳು ನೀತಿ ಬಗ್ಗೆ ಅಧ್ಯಯನ
ಇನ್ನು ಆಂಧ್ರಪ್ರದೇಶದಲ್ಲಿ ಮರಳು ನೀತಿಯ ಬಗ್ಗೆ ಅಧ್ಯಯನ ನಡೆಸಲು ಒಂದು ಸಮಿತಿಯನ್ನು ಅಲ್ಲಿಗೆ ಕಳುಹಿಸಲಾಗುವುದು ಸಮಿತಿ ವರದಿ ನೀಡಲಿದೆ ಎಲ್ಲರಿಗೂ ಸುಲಭವಾಗಿ ಮರಳು ಸಿಗಬೇಕು ನೈಸರ್ಗಿಕವಾಗಿ ಅಪಾಯವಾಗಬಾರದು ಮರಳು ಮಾಫಿಯಾಕ್ಕೆ ಕಡಿವಾಣ ಹಾಕಬೇಕು ಹೇಗೆ ಮಾಡಬಹುದು ಎಂಬ ಬಗ್ಗೆ ನಿಯಮಗಳನ್ನು ಅಳವಡಿಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದರು.

ಗಣಿ ಇಲಾಖೆ ಕಳೆದ ವರ್ಷ 3700 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿಯನ್ನು ಹಾಕಿಕೊಂಡಿತ್ತು. ರಾಜಸ್ವ ಸಂಗ್ರಹದಿಂದ ಹಣಗಳಿಸುವ ಉದ್ದೇಶವನ್ನು ಹೊಂದಲಾಗಿದೆ. ಅಲ್ಲದೆ ಸ್ಥಗಿತಗೊಂಡಿರುವ ಗಣಿಗಳನ್ನು ಪುನರಾರಂಭ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಮುಚ್ಚಿರು ಗಣಿಗಳ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ನೀಡಲು ಕೇಳಿದ್ದೇನೆ. ಎಲ್ಲಾ ಗಣಿಗಳನ್ನು ಪುನರಾರಂಭಿಸುವ ಉದ್ದೇಶದಿಂದ ಈ ಹಿಂದೆ ಆಗಿರುವ ಸಮಸ್ಯೆ ತಪ್ಪಿಸಲು ನೆರವಾಗುವುದು ಎಂದು ಹೇಳಿದರು.

ಅರಣ್ಯ ಕಂದಾಯ ಮತ್ತು ಇತರ ಇಲಾಖೆಗಳನ್ನು ಒಟ್ಟಿಗೆ ಸೇರಿಸಿ ಗಣಿ ಸಮಸ್ಯೆಗೆ ಸಂಬಂಧಿಸಿದಂತೆ ಪರಿಹರಿಸುತ್ತೇವೆ. ಇಲಾಖೆಯಲ್ಲಿ ಸಾವಿರಾರು ಪ್ರಕರಣಗಳಿವೆ ಎಲ್ಲವನ್ನು ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ನನೆಗುದಿಗೆ ಬಿದ್ದಿರುವ ಅರ್ಜಿಗಳನ್ನು ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದರು.

2 Comments

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...