Vijayapatha – ವಿಜಯಪಥ
Friday, November 1, 2024
CrimeNEWSದೇಶ-ವಿದೇಶ

ಉದ್ಯಮಿ ಕೊಲ್ಲಲು ಹೋದ ಹಂತಕರಿಂದ ಹೋಟೆಲ್‌ ಸಿಬ್ಬಂದಿ ಮೇಲೆ ಸಾಮೂಹಿಕ ಅತ್ಯಾಚಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಜೈಪುರ: ಉದ್ಯಮಿಯನ್ನು ಕೊಲೆ ಮಾಡಲು ಐಶಾರಾಮಿ ಹೋಟೆಲ್‌ಗೆ ಬಂದಿದ್ದ ಸುಪಾರಿ ಕಿಲ್ಲರ್ಸ್ ಹೋಟೆಲ್‌ನ ಇಬ್ಬರು ಮಹಿಳಾ ಸಿಬ್ಬಂದಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಈಗ ಕಂಬಿ ಹಿಂದೆ ಬಂಧಿಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ನರೇಶ್ ಗುಜ್ಜರ್, ಲೋಕೇಶ್, ರಾಹುಲ್, ದನ್ವೇರ್ ಮತ್ತು ಪ್ರಿನ್ಸ್ ತಿವಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಸುಪಾರಿ ಹಂತಕರು. ರಾಜಸ್ಥಾನದ ನೀಮಾನಾದಲ್ಲಿ ಈ ಘಟನೆ ನಡೆದಿದ್ದು, ಸ್ಟಾರ್ ಹೋಟೆಲ್ ವೊಂದರಲ್ಲಿ ತಂಗಿದ್ದ ಈ ಐದು ಮಂದಿ ಇಬ್ಬರು ಸಿಬ್ಬಂದಿ ಮೇಲೆ ಈ ಕೃತ್ಯ ಎಸಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೂಲಗಳ ಪ್ರಕಾರ ಈ ಐಶಾರಾಮಿ ಹೋಟೆಲ್‌ಗೆ ಆಗಮಿಸಿದ್ದ ದುಷ್ಕರ್ಮಿಗಳು ಕೊಠಡಿಯನ್ನು ಪಡೆದ ಬಳಿಕ ರೂಮ್ ಕೀಯನ್ನು ತೆಗೆದುಕೊಂಡು ಹೋಗಿದ್ದಾರೆ. ಅದಾದ ಕೆಲವೇ ಕ್ಷಣಗಳಲ್ಲಿ ರಿಸಪ್ಷನ್‌ಗೆ ಕರೆ ಮಾಡಿ ಸೆಕ್ಸ್ ವರ್ಕರ್‌ಗಳನ್ನು ರೂಮ್‌ಗೆ ಕಳುಹಿಸುವಂತೆ ಹೇಳಿದ್ದಾರೆ. ಅದಕ್ಕೆ ಹೋಟೆಲ್ ಸಿಬ್ಬಂದಿ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ನೇರವಾಗಿ ಮಹಿಳಾ ಸಿಬ್ಬಂದಿ ಮಲಗಿದ್ದ ಕೋಣೆ ಕಡೆಗೆ ಹೋಗಿದ್ದಾರೆ.

ಕೋಣೆಬಳಿ ಹೊರಗೆಡೆ ಮೂವರು ಆರೋಪಿಗಳು ಕಾವಲು ನಿಂತು ಇಬ್ಬರು ಒಳಗೆ ಹೋಗಿದ್ದಾರೆ. ಒಳಗೆ ಹೋದ ಆ ಇಬ್ಬರು ಆರೋಪಿಗಳು ಮಹಿಳಾ ಸಿಬ್ಬಂದಿಗೆ ಪಿಸ್ತೂಲು ತೋರಿಸಿ, ಅತ್ಯಾಚಾರವೆಸಗಿದ್ದಾರೆ. ಕೂಡಲೇ ಎಚ್ಚೆತ್ತ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ವಿಷಯ ತಿಳಿಸ ಕೆಲವೇ ನಿಮಿಷಗಳಲ್ಲೇ ಹೋಟೆಗೆ ಧಾವಿಸಿ ಪೊಲೀಸರ ವಿಶೇಷ ತಂಡ ಸ್ಥಳಕ್ಕೆ ಮಹಿಳಾ ಸಿಬ್ಬಂದಿಯನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸಿತು. ಬಂಧಿತ ಆರೋಪಿಗಳನ್ನು ಈ ವೇಳೆ ವಿಚಾರಣೆ ನಡೆಸಿದಾಗ ದುಷ್ಕರ್ಮಿಗಳು ಸ್ಫೋಟಕ ಮಾಹಿತಿ ನೀಡಿದ್ದು, ತಾವು ಒಬ್ಬ ಉದ್ಯಮಿಯನ್ನು ಹತ್ಯೆ ಮಾಡಲು ಬಂದಿದ್ದಾಗಿ ಹೇಳಿದ್ದಾರೆ.

ಇನ್ನು ಹತ್ಯೆ ಮಾಡದೇ ಇರಬೇಕಾದರೆ 20 ಲಕ್ಷ ರೂ. ಕೊಡಬೇಕು ಎಂದು ಉದ್ಯಮಿಗೆ ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಕೊಡದಿದ್ದರೆ ಕೊಲ್ಲುವುದಾಗಿ ಹೆದರಿಸಿದ್ದರಂತೆ. ಈ ಐವರು ಆರೋಪಿಗಳಲ್ಲಿ ಒಬ್ಬನಾದ ನರೇಶ್ ಈಗಾಗಲೇ ಒಂದು ಕೊಲೆ ಆರೋಪದಡಿ ಜೈಲು ಬಳಿಕ ಪೆರೋಲ್ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ