NEWSನಮ್ಮರಾಜ್ಯರಾಜಕೀಯ

ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಮಧ್ಯ ಪ್ರವೇಶ ಅಗತ್ಯ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ.ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ,ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ ಎಂದಿದ್ದಾರೆ.

ಕೋಲಾರದ ‘ವಿಸ್ಟ್ರಾನ್‌’ ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ  ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ಸಂಸ್ಥೆ ಹೇಳಿದೆ. ವಿಸ್ಟ್ರಾನ್‌ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೋಟಾ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪಾರಾಮರ್ಶೆ ಮಾಡಬೇಕು ಎಂದು ಹೇಳಿದ್ದಾರೆ.

ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...