ಬೆಂಗಳೂರು: ಸರ್ಕಾರ ಮುಂದೆ ಬಂದರೆ ವೇತನ ಪರಿಷ್ಕರಣೆ ಮಾಡಿಲಿ, ಇಂದಿನ ಪರಿಸ್ಥಿತಿಯಲ್ಲಿ ಸಾರಿಗೆ ನಿಗಮಗಳಿಂದ ವೇತನ ಪರಿಷ್ಕರಣೆ ಸಾಧ್ಯವಿಲ್ಲ ಎಂದು ಸಾರಿಗೆ ಸಂಸ್ಥೆಯ ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳೇ ಹೇಳುತ್ತಿದ್ದಾರೆ.
ಇಂದು ವಿಕಾಸಸೌಧದಲ್ಲಿ ನಡೆದ ನಾಲ್ಕೂ ನಿಗಮಗಳ ಅಧಿಕಾರಿಗಳೊಂದಿಗೆ ಸಭೆಯ ವೇಳೆ ಅಧಿಕಾರಿಳು ಈ ರೀತಿಯ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಸರ್ಕಾರವೇ ನಮ್ಮ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ನೇರವಾಗಿ ಹೇಳದೆ ಈ ರೀತಿ ಸಾರಿಗೆ ನಿಗಮಗಳ ಅಧಿಕಾರಿಗಳು ಹೇಳಿಕೆ ನೀಡುತ್ತಿದ್ದಾರಾ ಏಂಬು ಪ್ರಶ್ನೆ ಉದ್ಭವವಾಗುತ್ತಿದೆ.
ಸಾರಿಗೆ ನೌಕರರಿಗೆ ಆಗುತ್ತಿರುವ ತೊಂದರೆ ಬಗ್ಗೆ ನಿಗಮದ ಉನ್ನತ ಅಧಿಕಾರಿಗಳಲ್ಲೇ ಮರುಕ ವ್ಯಕ್ತಪಡಿಸಿ ಈರೀತಿಯ ಹೇಳಿಕೆ ನೀಡಿದ್ದಾರೆ ಎಂದೇ ನೌಕರರು ಸರ್ಕಾರಕ್ಕೆ ಮನವರಿಕೆ ಮಾಡಲು ಮುಂದಾಗುತ್ತಿದ್ದಾರೆ. ಆದರೆ, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.