ಗುನಾ: ಮಧ್ಯಪ್ರದೇಶದ ಗುನಾದಲ್ಲಿ 17 ವರ್ಷದ ಅಪ್ರಾಪ್ತೆಯನ್ನು 20 ವರ್ಷದ ಯುವತಿಯೊಬ್ಬಳು ಮದುವೆಯಾಗಿರುವ ಘಟನೆ ನಡೆದಿದೆ.
ಈ ಹಿನ್ನೆಲೆಯಲ್ಲಿ ಅಪ್ರಾಪ್ತೆಯನ್ನು ಮದುವೆಯಾದ ಯುವತಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಬುದೇ ಬಾಲಾಜಿ ಪ್ರದೇಶದಲ್ಲಿರುವ ನಿವಾಸಿಯೊಬ್ಬರು ನನ್ನ ಮಗಳು ಕೊತ್ವಾಲಿ ಕಾಣೆಯಾಗಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಮೇರೆಗೆ ಪೊಲೀಸರು ತನಿಖೆ ನಡೆಸಿದಾಗ ಮದುವೆ ಆಗಿರುವ ವಿಷಯ ಬೆಳಕಿಗೆ ಬಂದಿದೆ.
ಅಪ್ರಾಪ್ತೆಯನ್ನು ಮದುವೆಯಾದ ಯುವತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.