NEWSನಮ್ಮರಾಜ್ಯರಾಜಕೀಯ

ಎಚ್.ವಿಶ್ವನಾಥ್ ಸಚಿವರಾಗಲು ಅನರ್ಹರು: ಹೈಕೋರ್ಟ್ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುಮೇಲ್ಮನೆ ಸದಸ್ಯರಾದ ಆರ್. ಶಂಕರ್, ಎಂಟಿಬಿ ನಾಗರಾಜ್ ಗೆ ಸಚಿವ ಸ್ಥಾನ ನೀಡಲು ಹಸಿರು ನಿಶಾನೆ ತೋರಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಹಳ್ಳಿಹಕ್ಕಿ ಎಚ್.ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹರು ಎಂದು ಮಹತ್ವದ ಆದೇಶ ನೀಡಿದೆ.

ಸೋಮವಾರ ಎಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗಿಯ ಪೀಠ, ಎಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಮುಖ್ಯಮಂತ್ರಿ ಪರಿಗಣಿಸಬೇಕು. ಹೀಗಾಗಿ 2021ರವರೆಗೆ ಸಚಿವರಾಗಲು ಅವರು ಅರ್ಹರಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಆರ್.ಶಂಕರ್, ಎಂಟಿಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂಎಲ್‌ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಆದರೆ ಎಚ್‌.ವಿಶ್ವನಾಥ್‌ ಅವರು ನಾಮನಿರ್ದೇಶಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರು ಸಚಿವರಾಗಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.

ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ನೀಡಿರುವ ಈ ತೀರ್ಪಿನಿಂದ ಮುಖ್ಯಮಂತ್ರಿ ಯಡಿಯೂರಪ್ಪ ಸ್ವಲ್ಪ ನಿರಾಳರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...