NEWSಕೃಷಿ

KSRTC ಬಸ್‌ ನಿಲ್ದಾಣದಲ್ಲಿ ತರಕಾರಿ ವ್ಯಾಪಾರಕ್ಕೆ ವ್ಯವಸ್ಥೆ 

ಕಟ್ಟಿನಕೆರೆ ಮಾರುಕಟ್ಟೆಗೆ  ಭೇಟಿ ನೀಡಿದ ಶಾಸಕ ಪ್ರೀತಂ ಜೆ. ಗೌಡ ಹೇಳಿಕೆ 

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಕೋವಿಡ್-19 ಹಿನ್ನೆಲೆಯಲ್ಲಿ ವರ್ತಕರು ಹಾಗೂ ಗ್ರಾಹಕರ ಆರೋಗ್ಯ ದೃಷ್ಟಿಯಿಂದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ತರಕಾರಿ, ಹೂ ಮತ್ತು ಹಣ್ಣಿನ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಪ್ರೀತಂ ಜೆ. ಗೌಡ  ತಿಳಿಸಿದ್ದಾರೆ.

ಕಟ್ಟಿನಕೆರೆ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ. ಮಾರುಕಟ್ಟೆಗೆ ಇಂದು ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ದೇಶದಲ್ಲಿ ಕೊರೋನಾ ಶಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವ ಕಾರಣ ಮಾರುಕಟ್ಟೆಯಲ್ಲಿ ವರ್ತಕರುಗಳು ಎಚ್ಚೆತ್ತುಕೊಂಡು ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಹಾಗೂ ಟ್ಯಾಕ್ಸಿ ನಿಲ್ದಾಣದಲ್ಲಿ ವರ್ತಕರಿಗೆ ವ್ಯಾಪಾರ ಮಾಡಲು ಅಂಗಡಿಗಳ ವ್ಯವಸ್ಥೆ ಕಲ್ಪಿಸಲಿದ್ದು, ವ್ಯಾಪಾರಸ್ಥರು ತಮ್ಮ ತರಕಾರಿಗಳನ್ನು ಪದೇ ಪದೇ ಮನೆಗೆ ಹೊತ್ತೊಯ್ಯುವ ಬದಲು ಅಲ್ಲಿಯೇ ಇಟ್ಟರೆ ಅದನ್ನು ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿಗಳ ವ್ಯವಸ್ಥೆ ಕಲ್ಪಿಸಿ ತರಕಾರಿಗಳಿಗೆ ಭದ್ರತೆ ನೀಡಲಾಗುತ್ತದೆ ಎಂದು ತಿಳಿಸಿದರು.

ಮಾರುಕಟ್ಟೆಯಲ್ಲಿರುವ ವರ್ತಕರು ಹಾಗೂ ಹೊಸದಾಗಿ ವ್ಯಾಪಾರ ಮಾಡುತ್ತಿರುವ 160 ತರಕಾರಿ, ಹೂ ಮತ್ತು ಹಣ್ಣಿನ ಅಂಗಡಿಗಳಿಗೆ ಪ್ರತ್ಯೇಕ ಸ್ಥಳ ನಿಗದಿಮಾಡಿ ಬಿಸಿಲು ಮತ್ತು ಮಳೆಯಿಂದ ರಕ್ಷಣೆ ಇರುವಂತೆ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ ಎಂದು  ವರ್ತಕರಿಗೆ ಹೇಳಿದರು.

ವ್ಯಾಪಾರದ ಅಂಗಡಿಗಳು ಬಸ್ ನಿಲ್ದಾಣದಲ್ಲಿ ಸಾಲದೇ ಹೆಚ್ಚಾದರೆ ಅವರಿಗಾಗಿ ಚರ್ಚ್ ಯಿಂದ ಮಹಾವೀರ ವೃತ್ತದವರೆಗೆ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಿ ಅಂಗಡಿಗಳನ್ನು ಮಾಡಿಕೊಡಲಾಗುತ್ತದೆ ಎಂದು ಶಾಸಕರಾದ ಪ್ರೀತಂ ಜೆ. ಗೌಡ ಅವರು ಮಾರುಕಟ್ಟೆಯ ವರ್ತಕರಿಗೆ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಎ.ಪಿ.ಎಂ.ಸಿ.ಮಾರುಕಟ್ಟೆಯಲ್ಲಿ ನಾಳೆಯಿಂದ ಆಲೂಗಡ್ಡೆ ಬಿತ್ತನೆ ಬೀಜದ ಮಾರಾಟ ಪ್ರಾರಂಭವಾಗಲಿದ್ದು, ವರ್ತಕರ ಗಳು ಎಚ್ಚರಿಕೆ ವಹಿಸಿ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಂಡು ಬಿತ್ತನೆ ಬೀಜ ಖರೀದಿಸಲು ವ್ಯವಸ್ಥೆ ಮಾಡಬೇಕು ಎಂದು ವರ್ತಕರಿಗೆ ತಿಳಿಸಿದರು.

ರೈತರು ಕೇಳಿದಷ್ಟು ಆಲೂಗಡ್ಡೆ ಬಿತ್ತನೆ ಬೀಜ ನೀಡುವ ಬದಲು ಒಬ್ಬ ರೈತರಿಗೆ ಇಂತಿಷ್ಟು ಎಂದು ನಿಗದಿಪಡಿಸಿ ಎಲ್ಲಾ ರೈತರಿಗೂ ಬಿತ್ತನೆ ಬೀಜ ದೊರೆಯುವಂತೆ ವ್ಯವಸ್ಥೆ ಮಾಡಿ ಎಂದು ಎ.ಪಿ.ಎಂ.ಸಿ. ಮಾರುಕಟ್ಟೆಯ ಅಧ್ಯಕ್ಷರು ಹಾಗೂ ವರ್ತಕರುಗಳಿಗೆ ಶಾಸಕರು ಸೂಚಿಸಿದರು.

ತಹಸೀಲ್ದಾರ್ ಶಿವಶಂಕರಪ್ಪ, ನಗರಸಭೆ ಪೌರಾಯುಕ್ತರಾದ ಕೃಷ್ಣಮೂರ್ತಿ, ಡಿ.ವೈ.ಎಸ್.ಪಿ. ಪುಟ್ಟಸ್ವಾಮಿಗೌಡ, ಎ‌.ಪಿ.ಎಂ.ಸಿ. ಮಾರುಕಟ್ಟೆಯ ಅಧ್ಯಕ್ಷ  ಮಂಜೇಗೌಡ ಹಾಗೂ ವರ್ತಕರುಗಳು ಹಾಜರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply