NEWSಶಿಕ್ಷಣ-

ಅರಕಲಗೂಡು ಮಲ್ಲಿಪಟ್ಣಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೊರೊನಾ ಭೀತಿ ನಡುವೆಯೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೂರು ದಿನದಿಂದ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೂ ಪಾಲಕರ ನಿರ್ಲಕ್ಷ್ಯದಿಂದಾಗಿ ಸೋಂಕಿತ ವಿದ್ಯಾರ್ಥಿಯೊಬ್ಬ ಇಂದು ಪರೀಕ್ಷೆ ಬರೆದಿದ್ದಾನೆ.

ಇದರಿಂದ ಆತನ ಜತೆಗೆ ಪರೀಕ್ಷೆ ಬರೆದ ಇತರ 17 ವಿದ್ಯಾರ್ಥಿಗಳು ಸೇರಿ ಸಿಬ್ಬಂದಿ ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಇಂದು ಅರಕಲಗೂಡು ಮಲ್ಲಿಪಟ್ಣಣ ಸರ್ಕಾರ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆದ  ವಿದ್ಯಾರ್ಥಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಈ ವಿದ್ಯಾರ್ಥಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರಿಂದ ಅರಕಲಗೂಡು ಸರ್ಕಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಇದೇ ವೇಳೆ ವಿದ್ಯಾರ್ಥಿಯ ಸ್ವಾಬ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು.

ಆದರೆ ಇಂದು ಬಂದ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ತಕ್ಷಣ ಆರೋಗ್ಯ ಇಲಾಖೆ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಯನ್ನು ಹಾಸನದ ಕೊವಿಡ್-19 ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ.

ಶನಿವಾರ ಬೆಳಗ್ಗೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗೆ ಥರ್ಮಲ್ ಸ್ಕ್ರೀನ್ ಮಾಡಿದಾಗ ನಾರ್ಮಲ್ ಬಂದಿದೆ. ಹೀಗಾಗಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ ಪಾಲಕರು ಮಗನಿಗೆ ಡೆಂಗ್ಯೂ ಜ್ವರ ಇದ್ದರೂ ಪರೀಕ್ಷೆ ಬರೆಯಲು ಕಳುಹಿಸಿದ್ದು, ಇದರಿಂದ ಹಲವರ ಆತಂಕಕ್ಕೆ ಕಾರಣವಾಗಿದೆ.

ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ವಿಷಯಗಳ ಪರೀಕ್ಷೆಯನ್ನು ಪೂರಕ ಪರೀಕ್ಷೆ ವೇಳೆ ಬರೆಯಬಹುದು ಎಂದು ಜಿಲ್ಲಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ