NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

ಗಣೇಶನ ಮೂರ್ತಿಗಳ ಮೆರವಣಿಗೆ ನಿಷೇಧ: ಜಿಲ್ಲಾಧಿಕಾರಿ ಆರ್. ಗಿರೀಶ್

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬದ ಆಚರಣೆಗೆ ಅನುಮತಿ ನೀಡಿದ್ದು, ಮೆರವಣಿಗೆ ಮೂಲಕ ಗಣೇಶನ ಮೂರ್ತಿ  ತರುವ ಅಥವಾ ವಿಸರ್ಜನೆ ಮಾಡುವುದನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ನಗರದ ಅಂಬೇಡ್ಕರ್ ಭವನದಲ್ಲಿ ಗಣೇಶ ಚತುರ್ಥಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ ಜೊತೆಗೆ ಗಣೇಶನ ಕೂರಿಸಿರುವ ಸ್ಥಳದಲ್ಲಿ 20 ಜನಕ್ಕಿಂತ ಹೆಚ್ಚನ ಜನ ಸೇರಿದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿರುವವರು ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಹಾಗೂ ಸ್ವಯಂ ಸೇವಕರನ್ನು ಇಡುವ ಮೂಲಕ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು  ತಿಳಿಸಿದರು.

ಒಂದು ಅಥವಾ ಎರಡು ತಿಂಗಳ ವರೆಗೆ ಗಣೇಶ ಪ್ರತಿಷ್ಠಾಪನೆ ಮಾಡುತ್ತಿದ್ದ ಸಂಘ-ಸಂಸ್ಥೆಗಳು 1 ಅಥವಾ 3 ದಿನಗಳ ಕಾಲ ಗಣೇಶನನ್ನು ಕೂರಿಸಿ ವಿಸರ್ಜಿಸನೆ ಮಾಡಲು ಒಪ್ಪಿಗೆ ನೀಡಿದ್ದು, ಎಲ್ಲರೂ ನಿಯಮಾನುಸಾರ ಗಣೇಶ ಹಬ್ಬವನ್ನು ಅಚರಿಸುವಂತೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಮಾತನಾಡಿ, ಮದುವೆ ಸಮಾರಂಭಗಳಲ್ಲಿ ಹೆಚ್ಚಿನ ಜನರು ಭಾಗವಹಿಸಿದ್ದಾರೆ. ಈಗಾಗಲೇ ಎಚ್ಚರಿಕೆ ನೀಡಿದ್ದರೂ, ಮತ್ತೆ ಮತ್ತೆ ಮರುಕಳಿಸುತ್ತಿರುವ ಕಾರಣ ಕುಟುಂಬದವರು ಮತ್ತು ಕಲ್ಯಾಣ ಮಂಟಪಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗಾಗಿ ಸರ್ಕಾರ ನೀಡುವ ಮಾರ್ಗ ಸೂಚಿಗಳನ್ನು ಸಾರ್ವಜನಿಕರು ಅನುಸರಿಸುವಂತೆ  ತಿಳಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?