NEWSನಮ್ಮಜಿಲ್ಲೆ

ಹೋಂ ಕ್ವಾರಂಟೈನ್ ಇದ್ದವರಲ್ಲಿ ಕೊರೊನಾ ಪಾಸಿಟಿವ್ 

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಜಿಲ್ಲೆಗೆ ಹೊರ ರಾಜ್ಯದಿಂದ ಬಂದು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅಲ್ಲಿ ಇದ್ದ 5 ಜನರಿಗೆ ಕೊವೀಡ್-19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್  ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ 5 ಜನರು ಚನ್ನರಾಯಪಟ್ಟಣ ತಾಲೂಕಿಗೆ ಬಂದಿದ್ದು, ಅವರಲ್ಲಿ ಪತಿ-ಪತ್ನಿ ಇಬ್ಬರು ಮಕ್ಕಳು ಸೇರಿದ 4 ಜನ ಸೋಂಕಿತರು ಒಂದೇ ಕುಟುಂಬದವರಾಗಿದ್ದು, ಮುಂಬೈನಿಂದ ಮೇ 10 ರಂದು ಬಾಡಿಗೆ ಕಾರಿನ ಮೂಲಕ ಜಿಲ್ಲೆಗೆ ಬಂದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪತಿ ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಕೊರೊನಾ ಸೋಂಕಿತರಾಗಿದ್ದಾರೆ. ಇವರು ಜಿಲ್ಲೆಗೆ ಆಗಮಿಸಿದ ದಿನವೇ ಹೋಂ ಕ್ವಾರಂಟೈನ್ ಮಾಡಿದ್ದರಿಂದ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಸಂಚಾರ ಮಾಡಿರುವುದಿಲ್ಲ ಎಂದು ಹೇಳಿದ್ದಾರೆ.

ಈವರೆಗೂ ಮುಂಬೈ, ಮಹಾರಾಷ್ಟ್ರದಿಂದ 415 ಜನರು ಜಿಲ್ಲೆಗೆ ಆಗಮಿಸಿದ್ದು, ಎಲ್ಲರ ಗಂಟಲು ದ್ರವವನ್ನು ಕಡ್ಡಾಯವಾಗಿ ಕೊರೊನಾ ತಪಾಸಣೆಗೆ ಒಳಪಡಿಸಿಲಾಗುವುದು ಎಂದರಲ್ಲದೆ, ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದ ವಸತಿ ನಿಲಯದಲ್ಲಿರುವ ಇತರ ಶಂಕಿತರನ್ನು ಪ್ರಾಥಮಿಕ ಹಂತದ ಸಂಪರ್ಕಿತರೆಂದು ಪರಿಗಣಿಸಿ ಅವರನ್ನು ಕೋವಿಡ್-19 ಜಿಲ್ಲಾಸ್ಪತ್ರೆಗೆ ವರ್ಗಾಹಿಸಲಾಗಿರುವುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ  ಮಾತನಾಡಿ ಸೋಂಕಿತರ ಟ್ರಾವೇಲ್ ಹಿಸ್ಟರಿ ಮತ್ತು ಅವರನ್ನು ಕರೆತಂದ ಕಾರ್ ಚಾಲಕನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರಲ್ಲದೆ, ಪಾಸ್ ಪಡೆದು ಜಿಲ್ಲೆಗೆ ಹೊರ ರಾಜ್ಯಗಳಿಂದ ಬರುವವರನ್ನು ಚೆಕ್‍ಪೋಸ್ಟ್‍ಗಳಲ್ಲಿಯೇ ತಡಿದು ತಪಾಸಣೆ ನಡೆಸಿ ಅವರನ್ನು ನೇರವಾಗಿ ಇನ್ಟ್ಸಿಟ್ಯೂಷನಲ್ ಕ್ವಾರಂಟೈನ್‍ಗೆ ಕಳುಹಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್  ಸುದ್ದಿಗೋಷ್ಠಿಯಲ್ಲಿ ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ