ಹಾಸನ: ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಮುಖ್ಯವಾಗಿ ಪ್ರೌಢ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳು, ಗುಡ್ ಟಚ್ ಹಾಗೂ ಬ್ಯಾಡ್ ಟಚ್ ಬಗ್ಗೆ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸಂಭಂದಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಬಾಲ್ಯ ವಿವಾಹ ಸಾಮಾನ್ಯ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾದ ಎಂಬುದರ ಮಾಹಿತಿಯುಳ್ಳ ಕರಪತ್ರಗಳನ್ನು ಸಿದ್ದಪಡಿಸಿ ಗ್ರಾಮ ಪಂಚಾಯ್ತಿಗಳಿಗೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಲಗತ್ತಿಸಿ ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಗ್ರಾಮಗಳಲ್ಲಿ ಮತ್ತು ನಗರಗಳಲ್ಲಿ ಬಾಲ್ಯ ವಿವಾಹ ಕುರಿತು ಸುಳಿವು ಸಿಕ್ಕರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಾಗೂ ಚೈಲ್ಡ್‍ಲೈನ್‍ಗೆ ತಿಳಿಸುವಂತೆ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರಿಗೆ ಸಭೆ ನಡೆಸಿ ಮಾಹಿತಿ ನೀಡಿ ಮತ್ತು ಅವರೊಂದಿಗೆ ಸ್ತ್ರೀ ಶಕ್ತಿ ಸಂಘಗಳನ್ನು ಸೇರಿಸಿ ಮಾಹಿತಿ ನೀಡಿ ಎಂದು ಸಂಭಂದಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಈಲ್ಲೆಯಲ್ಲಿ ನಡೆದಿರುವ ಬಾಲ್ಯವಿವಾಹದ ಅಂಕಿ ಅಂಶಗಳನ್ನು ನಿರಂತರವಾಗಿ ಪತ್ತೆ ಹಚ್ಚಿ ತಪ್ಪಿತಸ್ತರ ವಿರುದ್ಧ ಪ್ರಖರಣ ದಾಖಲಿಸಿ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿಯವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಸೂಚಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿರುವ ಮೇಲ್ವಿಚಾರಕರಿಗೆ ಅಗತ್ಯ ಸಲಕರಣೆಗಳನ್ನು ನೀಡಿ ಬಾಲ್ಯವಿವಾಹ, ಬಾಲ ಕಾರ್ಮಿಕ ಮತ್ತು ಶಾಲೆ ಬಿಟ್ಟ ಮಕ್ಕಳ ಕುರಿತು ಅರ್ಥವಾಗುವಂತೆ ಆಡಿಯೋ ತುಣುಕುಗಳು ಮತ್ತು ಮಾಹಿತಿ ತುಂಬಿದ ಕರಪತ್ರಗಳನ್ನು ಹಂಚಿ ಜಾಗೃತರಾಗುವಂತೆ ಮಾಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಶಿವಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪಾಪಬೋವಿ, ಸಮಾಜ ಕಲ್ಯಾಣ ಇಲಾಖೆಯ ಶ್ರೀಧರ್, ಜಿಲ್ಲಾ ನಿರೂಪಣಾಧಿಕಾರಿ ಎ.ಜೆ. ಮಲ್ಲೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾಂತರಾಜು, ಪ್ರಚೋದನಾ ಸಂಸ್ಥೆಯ ನಿರ್ದೇಶಕರಾದ ಪೌಲರ್ಸ್ ಹಾಗೂ ಎಲ್ಲಾ ತಲೂಕಿನ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail