ಹಾವೇರಿ: ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಿರುವ ಸವಣೂರ ಪಟ್ಟಣದ ಎಸ್.ಎಂ.ಕೃಷ್ಣ ಬಡಾವಣೆಗೆ ಗೃಹ ಸಚಿವ ಹಾಗೂ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿ ಅವರೊಂದಿಗೆ ಮಾತನಾಡಿದ ಸಚಿವರು, ನಿಮ್ಮ ಆರೋಗ್ಯ ಕಾಳಜಿಯಿಂದ ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೀಲ್‍ಡೌನ್ ಮಾಡಲಾಗಿದೆ. ಎಲ್ಲರೂ ಸಹಕರಿಸಬೇಕು. ಸೀಲ್‍ಡೌನ್ ನಿಯಮಗಳನ್ನು 14 ದಿನಗಳವರೆಗೆ ಶಿಸ್ತುಬದ್ಧವಾಗಿ ನೀವು ಪಾಲಿಸಿದರೆ ತೆರವುಗೊಳಿಸಲಾಗುವುದು. ಸೀಲ್‍ಡೌನ್ ಅವಧಿಯಲ್ಲಿ ನಿಮಗೆ ಬೇಕಾದ ಎಲ್ಲ ಅಗತ್ಯ ವಸ್ತುಗಳನ್ನು ಸರ್ಕಾರದ ವತಿಯಿಂದ ಪೂರೈಸಲಾಗುವುದು. ಅಶಿಸ್ತಿನಿಂದ ವರ್ತಿಸಿ ಸೀಲ್‍ಡೌನ್ ಉಲ್ಲಂಘಿಸಿ ಸೋಂಕು ಹರಡಲು ಕಾರಣವಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.
ಈಗಾಗಲೇ ತಮಗೆ ಅಗತ್ಯವಾದ ದಿನಸಿಗಳನ್ನು ಉಚಿತವಾಗಿ ನೀಡಲಾಗಿದೆ. ಉಚಿತ ಹಾಲು ಸಹ ಒದಗಿಸಲಾಗಿದೆ. ನಿಮ್ಮ ಬೇಡಿಕೆಯಂತೆ ಸರ್ಕಾರದ ವತಿಯಿಂದಲೇ ಉಚಿತವಾಗಿ ತರಕಾರಿ ಸಹ ಭಾನುವಾರದಿಂದ ಪೂರೈಸಲಾಗುವುದು. ರೇಷನ್ ಖಾಲಿಯಾದರೆ ಸೀಲ್‍ಡೌನ್ ಅವಧಿವರೆಗೆ ಅಗತ್ಯವಾದ ದಿನಸಿ, ತರಕಾರಿ, ಹಾಲು ಪೂರೈಸಲು ಎಲ್ಲ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಸೀಲ್‍ಡೌನ್ ಏರಿಯಾದ ವಸತಿ ನಿಲಯದಲ್ಲಿ ಆರಂಭದಲ್ಲಿ ಫಿವರ್ ಕ್ಲಿನಿಕ್‍ನಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಳಮಾಡಬೇಕು. ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿ ದಿನದ 24 ತಾಸು ಕಾರ್ಯನಿರ್ವಹಿಸುವಂತೆ ಕ್ರಮವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಸೀಲ್‍ಡೌನ್ ಏರಿಯಾದಲ್ಲಿ 100 ಮೀಟರ್ ಅಂತರದಲ್ಲಿ ಮೊದಲ ರ್ಯಾಂಡಮ್ ತಪಾಸಣೆ ಹಾಗೂ ಎರಡನೇ ಹಂತದಲ್ಲಿ 200 ಮೀಟರ್‍ನಲ್ಲಿ ರ್ಯಾಂಡಮ್ ಸ್ಯಾಂಪಲ್‍ಗಳನ್ನು ತಪಾಸಣೆಯನ್ನು ಕೈಗೊಳ್ಳಬೇಕು. ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಸೀಲ್‍ಡೌನ್ ಏರಿಯಾದಲ್ಲಿ ತೀವ್ರ ನಿಗಾವಹಿಸಿ ತಪಾಸಣೆ, ಮಾದರಿ ಸಂಗ್ರಹ, ಆರೋಗ್ಯದ ಮೇಲೆ ನಿಗಾ ವಹಿಸುವ ಕಾರ್ಯಕ್ರಮವನ್ನು ಕೈಗೊಳ್ಳುವಂತೆ ತಾಲೂಕಾ ಆರೋಗ್ಯಾಧಿಕಾರಿಗಳ ತಂಡಕ್ಕೆ ಸೂಚನೆ ನೀಡಿದರು.
ಸೀಲ್‍ಡೌನ್ ಏರಿಯಾದಲ್ಲಿ 394 ಕುಟುಂಬಗಳಿಗೆ ಉಚಿತವಾಗಿ ಆಹಾರ್ ಕಿಟ್, ಹಾಲು , ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಉಚಿತವಾಗಿ ಸರ್ಕಾರದಿಂದಲೇ ತರಕಾರಿ ಪೂರೈಸಲಾಗುವುದು. ಸಂಘ-ಸಂಸ್ಥೆಗಳ ನೆರವಿನಿಂದ ಹಣ್ಣು ಸಹ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail