NEWSನಮ್ಮಜಿಲ್ಲೆ

ಪಿಪಿ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆ ವೀಕ್ಷಿಸಿದ ಗೃಹ ಸಚಿವರು

ಶೀಘ್ರ ಹಸಿರು ಜೋನ್ ವಲಯಕ್ಕೆ ಹಾವೇರಿ ಜಿಲ್ಲೆ l ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ  ಬಸವರಾಜ ಬೊಮ್ಮಾಯಿ  ಆಸ್ಪತ್ರೆಯ ಮೂಲಕ ಸೌಕರ್ಯಗಳು, ಕೋವಿಡ್ ವ್ಯಕ್ತಿಗಳಿಗೆ ಚಿಕಿತ್ಸಾ ಕ್ರಮ, ಹೊಸ ವೆಂಟಿಲೇಟರ್ ವ್ಯವಸ್ಥೆ, ಹಾಸಿಗೆ ಸೌಲಭ್ಯ ಸೇರಿದಂತೆ ವಿವಿಧ ಸೌಕರ್ಯಗಳ ವೀಕ್ಷಣೆ ವೈದ್ಯರಿಂದ ಮಾಹಿತಿ ಪಡೆದರು.

ಮಂಗಳವಾರ ಮಧ್ಯಾಹ್ನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೋವಿಡ್ ಆಸ್ಪತ್ರೆ ವಾರ್ಡ್‍ಗಳ ವೀಕ್ಷಣೆಗೆ ಮುನ್ನ ಪಿಪಿ ಕಿಟ್ ಧರಿಸಿ ಎಲ್ಲರ ಗಮನ ಸೆಳೆದರು.  ಸಚಿವರೊಂದಿಗೆ ವೈದ್ಯರು ಕೋವಿಡ್ ವಾರ್ಡ್‍ಗಳ ಡ್ಯೂಟಿಯಲ್ಲಿರುವ ಪೊಲೀಸ್‍ರು ಪಿಪಿ ಕಿಟ್‍ಗಳನ್ನು ಧರಿಸಿ ಎಲ್ಲರ ಗಮನ ಸೆಳೆಯುವುದರ ಜೊತೆಗೆ ಕೋವಿಡ್ ರಕ್ಷಣೆಯೊಂದಿಗೆ ವ್ಯವಹರಿಸುವ ಕುರಿತಂತೆ ಜಾಗೃತಿ ಮೂಡಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗ್ರೀನ್ ಜೋನ್‍ನಲ್ಲಿದ್ದ ಹಾವೇರಿ ಜಿಲ್ಲೆಗೆ ಮುಂಬೈನಿಂದ ಬಂದ ವಕ್ತಿಗಳಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರವುದು ದುರ್ದೈದ ಸಂಗತಿಯಾಗಿದೆ. ಸವಣೂರ ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ವ್ಯಕ್ತಿಗಳ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ಸಹ ನೆಗಟಿವ್ ಬಂದಿವೆ. ಅದೇ ರೀತಿ ಅಂದಲಗಿ ಪ್ರಕಣದದಲ್ಲಿ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ವ್ಯಕ್ತಿಗನ್ನು ಕ್ವಾರಂಟೈನ್ ಮಾಡಲಾಗಿದೆ ಹಾಗೂ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ.

ಕಂಟೋನ್ಮೆಂಟ್ ಜೋನ್‍ನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ವಾರಂಟೈನ್ ಕೇಂದ್ರಗಳ ಮೇಲೆ ಹಾಗೂ ವಿಶೇಷವಾಗಿ ಹೊರಗಡೆಯಿಂದ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯನ್ನು ಗ್ರೀನ್ ಜಿಲ್ಲೆಯಾಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಲಾಕ್‍ಡೌನ್ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಗಡಿ ಭಾಗದಲ್ಲಿ ನಿಯಂತ್ರಣ ಕಾರ್ಯದಲ್ಲಿ ಪೊಲೀಸ್ ಇಲಾಖೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದೆ. ಆಸ್ಪತ್ರೆ, ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣ ಹಾಗೂ ಚೆಕ್‍ಪೋಸ್ಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಇಲಾಖೆಯ ಸಿಬ್ಬಂದಿಗಳ ತಪಾಸಣೆ ಸೂಚಿಸಲಾಗಿದೆ ಹಾಗೂ ಈ ಸಿಬ್ಬಂದಿಗೆ ಪಿಪಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್