Vijayapatha – ವಿಜಯಪಥ
Friday, November 1, 2024
NEWSರಾಜಕೀಯಸಂಸ್ಕೃತಿ

ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆಗೆ ಎಚ್‌ಡಿಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರ ಅಭಿವೃದ್ಧಿಗಾಗಿ ತಮ್ಮ ಭೂಮಿಯನ್ನು ತ್ಯಾಗ ಮಾಡಿ ಕೂಲಿ ಕಾರ್ಮಿಕರಾಗಿರುವ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರವನ್ನೇಕೆ ರಚನೆ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮರಾಠ ನಿಗಮ ರಚನೆಗೆ ವಿರೋಧ ಇಲ್ಲ. ಆದರೂ ಸರ್ಕಾರಕ್ಕೆ ಕೇಳುತ್ತೇನೆ, ರಾಜ್ಯದ ಅಭಿವೃದ್ಧಿಗೆ ಹೆಚ್ಚು ತೆರಿಗೆ ಪಾವತಿ ಆಗುತ್ತಿರುವುದು ಬೆಂಗಳೂರಿನ ಒಕ್ಕಲಿಗ ಸಮಾಜದಿಂದ. ಒಕ್ಕಲಿಗ ಸಮುದಾಯವದವರು ತಮ್ಮ ಕೃಷಿ ಭೂಮಿಯನ್ನು ಅಭಿವೃದ್ಧಿಗೆ ಹಾಗೂ ಕೈಗಾರಿಕೆಗಳಿಗೆ ಬಿಟ್ಟುಕೊಟ್ಟು ಕಾರ್ಮಿಕರಾಗಿದ್ದಾರೆ. ಬೆಂಗಳೂರು‌ ನಗರಕ್ಕೆ ಒಕ್ಕಲಿಗ ಸಮುದಾಯ ಭೂಮಿ ಕೊಟ್ಡು ತ್ಯಾಗ ಮಾಡಿದ್ದಾರೆ. ಹಾಗೆ ನೋಡಿದರೆ ಮೊದ್ಲು ಒಕ್ಕಲಿಗ ‌ಪ್ರಾಧಿಕಾರ ರಚನೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.

ಸರ್ಕಾರ ಮತಕ್ಕೋಸ್ಕರ ಪ್ರಾಧಿಕಾರ ಮಾಡುತ್ತಿದೆ. ಪ್ರಾಧಿಕಾರ ರಚನೆಗಳನ್ನು ಮಾಡುವುದು ಕೇವಲ ತಾತ್ಕಾಲಿಕ ಅಷ್ಟೇ. ಸಣ್ಣ ಮಟ್ಟದ ರಾಜಕಾರಣ ಹಾಗೆ ನೋಡಿದರೆ ಮೊದಲು ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ಮಾಡ ಬೇಕಿತ್ತು. ಒಕ್ಕಲಿಗ ಸಮುದಾಯದ ತ್ಯಾಗ ಸೇವೆ ದೊಡ್ಡದು. ಆದರೆ ಮತಕ್ಕಾಗಿ ಪ್ರಾಧಿಕಾರ ರಚನೆ ಸರಿಯಲ್ಲವೆಂದು ಸರ್ಕಾರಕ್ಕೆ ಕಿವಿ ಮಾತು ಹೇಳಿದರು.

ಭಾಷೆ ಭಾಷೆಗಳ ನಡುವೆ ಸಂಘರ್ಷ ಶುರುವಾಗಿದೆ. ಸರ್ಕಾರ ಕನ್ನಡಪರ ಸಂಘಟನೆಗಳನ್ನು ದಬ್ಬಾಳಿಕೆಯಿಂದ ಹದ್ದುಬಸ್ತಿನಲ್ಲಿಡಲು ಪ್ರಯತ್ನಿಸುತ್ತಿದೆ. ಕನ್ನಡಪರ ಸಂಘಟನೆಗಳ ಜತೆ ಸಭೆ ನಡೆಸಿ ಪ್ರಾಧಿಕಾರದ ರಚನೆಯ ಉದ್ದೇಶವನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೈತ್ರಿ ಸರ್ಕಾರದ ಆಡಳಿತಾವಧಿಯಲ್ಲೂ ಬ್ರಾಹ್ಮಣ, ಆರ್ಯ ವೈಶ್ಯ ನಿಗಮ ಮಾಡಿದ್ದೇವೆ. ಆದರೆ ನಿಗಮಗಳಿಂದ ಯಾರಿಗೂ ಅನುಕೂಲವಾಗಿಲ್ಲ ಹೀಗಾಗಿ ಸರ್ಕಾರ ಎಚ್ಚರಿಕೆ ಹೆಜ್ಜೆಗಳನ್ನು ಇಡಬೇಕೆಂದು ಸಲಹೆ ನೀಡಿದರು.

ಹೊರ ರಾಜ್ಯಗಳಲ್ಲಿ ಕರ್ಪ್ಯೂ ಜಾರಿಗೆ ಗೆ ಚಿಂತನೆಗಳು ನಡೆಯುತ್ತಿವೆ. ಕೋವಿಡ್ ಎರಡನೇ ಅಲೆ ಬರುತ್ತದೆ ಇದರಿಂದಾಗಿ ಮಕ್ಕಳನ್ನು ರಕ್ಷಿಸುವುದು ಕಷ್ಟವೆಂದು ತಜ್ಞರು ಹೇಳಿದ್ದಾರೆ. ಮಕ್ಕಳ ಜೀವವನ್ನು ಗಮನದಲ್ಲಿಟ್ಕೊಂಡು ಸರ್ಕಾರ ಶಾಲೆಗಳನ್ನು ಪುನರಾರಂಬಿಸುವ ಬಗ್ಗೆ ನಿರ್ಧರಿಸಲಿ. ಸರ್ಕಾರ ಶಾಲಾರಂಭ ವಿಚಾರದಲ್ಲಿ ತರಾತುರಿ ಮಾಡೋದು ಬೇಡ ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...