NEWSನಮ್ಮರಾಜ್ಯರಾಜಕೀಯ

ಸಚಿವ ಸಿ.ಟಿ. ರವಿ ನೆತ್ತಿಗೇರಿದೆ ಅಧಿಕಾರದ ಅಮಲು : ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು ಎಚ್ಚರಿಕೆ ನೀಡಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕಮರಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು ಎಂದು ಹೇಳಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಮೊನಚಾದ ಮಾತನಲ್ಲೇ ತಿವಿದಿದ್ದಾರೆ.

ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಖಜಾನೆಗೆ 25 ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ನಾನು. ಹೀಗಾಗಿ ಲೂಟಿ ಮಾಡಿದವರು ಅಧಿಕಾರದ ಅಮಲಿನಲ್ಲಿ ತೇಲಾಡುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಳ್ಳಬೇಕಾಗಿಲ್ಲ ಎಂದು ಬಿಜೆಪಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ. ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ. ಅದು ಬಿಟ್ಟು ಬಾಯಿ ಚಪಲಕ್ಕೆ ಮಾತನಾಡುವ ಅಧಿಕಾರದ ಅಮಲು ಬಹಳ ಕಾಲ ಉಳಿಯುವುದಿಲ್ಲ ಎಂದು ತೀಕ್ಷ್ಣವಾದ ಸಲಹೆಯನ್ನೂ ಎಚ್‌ಡಿಕೆ ನೀಡಿದ್ದಾರೆ.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...