NEWSಆರೋಗ್ಯ

ರಕ್ತ ಪಡೆಯಲು ಗರ್ಭಿಣಿಗೆ ಆರೋಗ್ಯ ಸಮಿತಿ ನೆರವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಚಳ್ಳಕೆರೆ ನಗರದ ಹಳೇ ನಗರದಲ್ಲಿ ವಾಸವಿರುವ  8 ತಿಂಗಳ ಗರ್ಭಿಣಿ ಶ್ವೇತ ಗಂಡ ರಾಜಕುಮಾರ್, ಇವರ ರಕ್ತದಲ್ಲಿ ಹಿಮೋಗ್ಲೊಬಿನ್ ಕಡಿಮೆ ಇದ್ದು, ರಕ್ತ ಖರೀದಿಸಿ ಪಡೆಯುವ ಸಲುವಾಗಿ ಚಳ್ಳಕೆರೆ ಮಹಿಳಾ ಆರೋಗ್ಯ ಸಮಿತಿಯಿಂದ 2 ಸಾವಿರ ರೂ. ಗಳ ನೆರವನ್ನು ತಹಸೀಸಿಲ್ದಾರ್ ಮಲ್ಲಿಕಾರ್ಜುನ್ ಗರ್ಭಿಣಿಗೆ ವಿತರಿಸಿದರು.

28 ವರ್ಷ ವಯಸ್ಸಿನ ಶ್ವೇತ ಅವರ ಆರೋಗ್ಯ ತಪಾಸಣೆ ನಡೆಸುವ ಸಲುವಾಗಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ  ಸಿ. ಸುಶೀಲ ಹಾಗೂ ಆಶಾ ಕಾರ್ಯಕರ್ತೆಯಾದ ಪದ್ಮಾವತಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಶಮಾಪರ್ವಿನ್ ಅವರಲ್ಲಿ ಕರೆದುಕೊಂಡು ಬಂದಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಹಿಳೆಯ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕೇವಲ 8 ಗ್ರಾಂ  ಇರುವುದನ್ನು ತಿಳಿದುಬಂದಿದ್ದು, ಮಹಿಳೆಗೆ ಕೂಡಲೆ ರಕ್ತ ಪಡೆಯುವಂತೆ ವೈದ್ಯರು ಶಿಫಾರಸು ಮಾಡಿದ್ದರು.  ಬಡ ಕುಟುಂಬದ ಮಹಿಳೆಗೆ ರಕ್ತ ಖರೀದಿಸಿ ಹಾಕಿಸಿಕೊಳ್ಳಲು ಮಹಿಳಾ ಆರೋಗ್ಯ ಸಮಿತಿ (ಮಾಸ್) ಯಿಂದ  2000 ರೂ.ಗಳನ್ನು  ತಹಸೀಲ್ದಾರ್ ಮಲ್ಲಿಕಾರ್ಜುನ ಗುರುವಾರ ವಿತರಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ. ಪ್ರೇಮಸುಧಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಸಿ.ಡಿ.ಪಿ.ಓ  ಮೋಹನಕುಮಾರಿ, ನಗರ ಆರೋಗ್ಯ ಕೇಂದ್ರದ ವೈದ್ಯ ಡಾ. ಮುಸ್ತಾಫ್ ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ