Please assign a menu to the primary menu location under menu

Search By Date & Category

Latestಆರೋಗ್ಯನಮ್ಮರಾಜ್ಯರಾಜಕೀಯ

ಉಚಿತ, ತ್ವರಿತ ವೈದ್ಯಕೀಯ ಸೇವೆಗಾಗಿ ಆಮ್‌ ಆದ್ಮಿ ಹೆಲ್ತ್‌ ಪಾಯಿಂಟ್‌ ಲೋಕಾರ್ಪಣೆ: ಎಎಪಿಯಿಂದ ಮಹತ್ವದ ಹೆಜ್ಜೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆಯನ್ನು ಉಚಿತ ಹಾಗೂ ತ್ವರಿತವಾಗಿ ನೀಡುವ ನಿಟ್ಟಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಮಹತ್ವದ ಹೆಜ್ಜೆ ಇಟ್ಟಿದ್ದು, ಜಯನಗರದಲ್ಲಿ “ಆಮ್‌ ಆದ್ಮಿ ಹೆಲ್ತ್‌ ಪಾಯಿಂಟ್” ಕೇಂದ್ರವನ್ನು ಶುಕ್ರವಾರ ಲೋಕಾರ್ಪಣೆ ಮಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಯನಗರ ವಿಧಾನಸಭಾ ಕ್ಷೇತ್ರದ ಎಎಪಿ ವೀಕ್ಷಕ ಡಾ. ಬಿ.ಎಲ್‌.ವಿಶ್ವನಾಥ್‌, “ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತ ಸೇವೆ ದೊರೆಯುತ್ತಿಲ್ಲ. ಸಣ್ಣ ತಪಾಸಣೆಗೂ ಅಲ್ಲಿನ ಸಿಬ್ಬಂದಿ ಗಂಟೆಗಟ್ಟಲೆ ಕಾಯಿಸುತ್ತಾರೆ. ಖಾಸಗಿ ಆಸ್ಪತ್ರೆಗಳು ಬಡ ಹಾಗೂ ಮಧ್ಯಮವರ್ಗದ ರೋಗಿಗಳಿಗೆ ಗಗನಕುಸುಮವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಸ್ತುತ ಈ ಎಲ್ಲಾ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಎಎಪಿಯು ಆಮ್‌ ಆದ್ಮಿ ಹೆಲ್ತ್‌ ಪಾಯಿಂಟ್‌ ತೆರೆದಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ ಮುಂತಾದ ಕಾಯಿಲೆಗಳಿಗೆ ಸಂಬಂಧಿಸಿ ಉಚಿತವಾಗಿ ರಕ್ತದ ಪರೀಕ್ಷೆ ನಡೆಸಲಾಗುತ್ತದೆ. ಅನುಭವಿ ವೈದ್ಯರು ವೈದ್ಯಕೀಯ ಸಲಹೆ ನೀಡಲಿದ್ದಾರೆ” ಎಂದು ಹೇಳಿದರು.

ಜಯನಗರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಆರ್‌.ಮಂಜುನಾಥ್‌ ಮಾತನಾಡಿ, “ಪ್ರಸ್ತುತ ಜಯನಗರ ಪೂರ್ವ ವಾರ್ಡ್‌ನ ನಾಲ್ಕನೇ ಹಂತದ ಪಾರ್ಕ್‌ನಲ್ಲಿ ಆಮ್‌ ಆದ್ಮಿ ಹೆಲ್ತ್‌ ಪಾಯಿಂಟ್‌ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲೂ ಒಂದೊಂದು ಪಾಯಿಂಟ್‌ ಆರಂಭಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಜನರಿಗೆ ನೆರವಾಗುವ ಉದ್ದೇಶದಿಂದಲೇ ಹೆಲ್ತ್‌ ಪಾಯಿಂಟ್‌ಗಳನ್ನು ಆರಂಭಿಸಲಾಗುತ್ತಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆಯುವ ಮೂಲಕ ಇದನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಮೂಲಭೂತವಾದ ವೈದ್ಯಕೀಯ ಸೇವೆಗಳು ಉಚಿತವಾಗಿ ಹಾಗೂ ಸುಲಭವಾಗಿ ಸಿಗುವಂತೆ ಮಾಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಇದರಲ್ಲಿ ಅದು ವಿಫಲವಾಗಿರುವುದರಿಂದ ಈ ಮಹತ್ಕಾರ್ಯಕ್ಕೆ ಎಎಪಿ ಮುಂದಾಗಿದೆ ಎಂದು ಜಯನಗರ ವಿಧಾನಸಭಾ ಕ್ಷೇತ್ರದ ವೈದ್ಯಕೀಯ ಘಟಕದ ಅಧ್ಯಕ್ಷರಾದ ಡಾ. ಮಹೇಶ್‌ ವಿವರಿಸಿದರು.

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಅದರಿಂದ ಪ್ರೇರಣೆ ಪಡೆದು ನಾವು ಆರೋಗ್ಯವಂತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಮುನ್ನಡೆದಿದ್ದೇವೆ ಎಂದು ಹೇಳಿದರು.

ಸ್ಥಳೀಯ ಎಎಪಿ ಮುಖಂಡರಾದ ಫಿರೋಜ್‌ ಖಾನ್‌, ಇರ್ಷದ್‌, ಸೈಫ್‌, ಉಮೇಶ್‌ ಹಾಗೂ ಇತರರು ಉಪಸ್ಥಿತರಿದ್ದರು.

ವಿಚಾರಣೆ ನೆಪದಲ್ಲಿ ಮಹಿಳೆ ಕರೆತಂದು ಅತ್ಯಾಚಾರ: ಬಿಎಸ್‌ಎಫ್ ಎಸ್‌ಐ ಬಂಧನ

ಸತ್ಯಪಥ ನಿಮ್ಮ ವಿಜಯಪಥಕ್ಕೆ  ಬಲ ತುಂಬಲು 2ರೂ.ನಿಂದ ನಿಮಗೆ ಅನಿಸಿದಷ್ಟು ದೇಣಿಗೆ (Donation) ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ.   ಈ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ  ಅಥವಾ 9986160163ಗೆ  ಕಳುಹಿಸುವ ಮೂಲಕ ಮಾರ್ಗದೀಪವಾಗಿರಿ.

Leave a Reply