NEWSಆರೋಗ್ಯದೇಶ-ವಿದೇಶ

ಭಾರತಕ್ಕೆ ಶೀಘ್ರದಲ್ಲೇ ಲಭ್ಯವಾಗಲಿದೆ ಮತ್ತೊಂದು ಕೋವಿಡ್ ಲಸಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನಿರೀಕ್ಷೆಯಂತೆಯೇ ಭಾರತಕ್ಕೆ ಶೀಘ್ರದಲ್ಲೇ ಮತ್ತೊಂದು ಕೋವಿಡ್ ಲಸಿಕೆ ಮಾಡೆರ್ನಾ ಲಭ್ಯವಾಗಲಿದ್ದು ಆಮದು ಮಾಡಿಕೊಳ್ಳಲು ಸಿಪ್ಲಾ ಸಂಸ್ಥೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನೀಡಿದೆ.

ಅಮೆರಿಕದಲ್ಲಿ ತಯಾರಿಸಲಾಗುತ್ತಿರುವ ಮಾಡರ್ನಾ ಲಸಿಕೆಯ ಆಮದು ಮತ್ತು ಮಾರುಕಟ್ಟೆ ಹಕ್ಕುಗಳಿಗಾಗಿ ದೇಶೀಯ ಔಷಧ ಕಂಪನಿ ಸಿಪ್ಲಾ ಸೋಮವಾರ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿರುವ ಡಿಸಿಜಿಐ ಇದೀಗ ಲಸಿಕೆ ಆಮದಿಗೆ ಅನುಮತಿ ನೀಡಿದೆ. ಹೀಗಾಗಿ ಭಾರತದಲ್ಲಿ ತುರ್ತು ಬಳಕೆಗಾಗಿ ಮಾಡರ್ನಾ ಸಂಸ್ಥೆಯ ಕೋವಿಡ್-19 ಲಸಿಕೆ ಆಮದಿಗೆ ಸಿಪ್ಲಾ ಕಂಪನಿಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದಿಸಿದೆ.

ಔಷಧ ಮತ್ತು ಸೌಂದರ್ಯವರ್ಧಕಗಳ ಕಾಯ್ದೆ, 1940ರ ಅಡಿಯಲ್ಲಿ ಹೊಸ ಔಷಧಗಳು ಮತ್ತು ಕ್ಲಿನಿಕಲ್‌ ಟ್ರಯಲ್‌ ನಿಯಮಗಳು, 2019ರ ಅನ್ವಯ ಅನುಮತಿ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇನ್ನು 18 ವರ್ಷ ಮೇಲ್ಪಟ್ಟವರಲ್ಲಿ ಮಾಡರ್ನಾ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲಾಗುತ್ತದೆ. ಕೊವ್ಯಾಕ್ಸ್‌ ಮೂಲಕ ಭಾರತಕ್ಕೆ ಸ್ವಲ್ಪ ಪ್ರಮಾಣದ ಮಾಡರ್ನಾ ಕೋವಿಡ್‌–19 ಲಸಿಕೆ ಡೋಸ್‌ಗಳನ್ನು ಪೂರೈಸಲು ಅಮೆರಿಕ ಸರ್ಕಾರ ಸಮ್ಮತಿಸಿದೆ ಎಂದು ಮಾಡೆರ್ನಾ ಕಂಪನಿಯು ಡಿಸಿಜಿಐಗೆ ತಿಳಿಸಿತ್ತು.

ದೇಶಕ್ಕೆ ಸಿಕ್ಕ ನಾಲ್ಕನೇ ಕೋವಿಡ್ ಲಸಿಕೆ
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಇದೀಗ ಭಾರತಕ್ಕೆ ನಾಲ್ಕನೇ ಕೋವಿಡ್ ಲಸಿಕೆ ಲಭ್ಯವಾದಂತಾಗಿದ್ದು, ದೇಶದಲ್ಲಿ ಸದ್ಯ ಆಸ್ಟ್ರಾಜೆನೆಕಾ-ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವಿಶೀಲ್ಡ್, ಭಾರತ್‌ ಬಯೋಟೆಕ್‌-ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೊವ್ಯಾಕ್ಸಿನ್‌ ಮತ್ತು ರಷ್ಯಾದ ಸ್ಪುಟ್ನಿಕ್–ವಿ ಲಸಿಕೆಗಳನ್ನು ನೀಡಲಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್