NEWSಆರೋಗ್ಯನಮ್ಮಜಿಲ್ಲೆ

ಜೇವರ್ಗಿ: ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ- ದೊಡ್ಡಪ್ಪಗೌಡ ಪಾಟೀಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ತಾಲೂಕಿನ ಜೈನಾಪೂರ ಗ್ರಾಮದಲ್ಲಿ ಶುಕ್ರವಾರ ಕೋವಿಡ್ – 19 ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ನಮ್ಮ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಪ್ರತಿಯೊಬ್ಬ ಸಾರ್ವಜನಿಕರೂ ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆಯಬೇಕೆಂದು ಮನವಿ ಮಾಡಿದರು.

ಈ ಮೊದಲು ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಕೊರತೆ ಇತ್ತು. ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಸರಬರಾಜು ಮಾಡಿವೆ ಆದಕಾರಣ ಎಲ್ಲರೂ ಲಸಿಕೆಯ ಬಗ್ಗೆ ಯಾವುದೇ ಅಪಪ್ರಚಾರಕ್ಕೇ ಕಿವಿಗೊಡದೆ ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದರು.

ಕೋವಿಡ ಸಂದರ್ಭದಲ್ಲಿ ತಮ್ಮ ಜೀವನವನ್ನು ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ವಿಶೇಷವಾಗಿ .

ಈ ಸಂದರ್ಭದಲ್ಲಿ ತಾಲೂಕಿನ ಆರೋಗ್ಯಅಧಿಕಾರಿ ಸಿದ್ದು ಪಾಟೀಲ, ಬಿಜೆಪಿ ಮುಖಂಡರಾದ ತಿಪ್ಪಣ್ಣ ರಾಠೋಡ,ಶ್ರೀಶೈಲಗೌಡ ಪಾಟೀಲ ಕರಕಳ್ಳಿ, ರಾಕೇಶ ಹರಸೂರ, ರಮೇಶ ರಾಠೋಡ, ಈಶ್ವರ ಪಾಟೀಲ ಜೈನಾಪೂರ ಇತರರು ಇದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...