NEWSಆರೋಗ್ಯಸಂಸ್ಕೃತಿ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಪರಿಸರ ಅಧಿಕಾರಿ ಪುರಾಣಿಕ ಕರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ವಿಷಯುಕ್ತ ರಾಸಾಯನಿಕ ಬಣ್ಣಗಳನ್ನು ಹೊಂದಿದ ಗಣಪತಿ ವಿಗ್ರಹಗಳು ನೀರಿನಲ್ಲಿ ವಿಸರ್ಜನೆಗೊಂಡು ನದಿ ತೊರೆಗಳು, ಕೆರೆಕಟ್ಟೆಗಳ ನೀರು ಮಾಲಿನ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಪಿಓಪಿ ಮತ್ತು ಬಣ್ಣದ ಗಣಪತಿ ಮೂರ್ತಿಗಳನ್ನು ಬಳಸದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧಿಸಿದೆ ಎಂದು ಪರಿಸರ ಅಧಿಕಾರಿ ಆರ್.ಎಸ್.ಪುರಾಣಿಕ ತಿಳಿಸಿದ್ದಾರೆ.

ಪ್ರಸ್ತುತ ಕೋವಿಡ್ ಸೋಂಕು ಇಡೀ ವಿಶ್ವವನ್ನು ಆವರಿಸಿದ್ದು, ಇಂತಹ ಸಂದಿಗ್ದ ಸಂದರ್ಭದಲ್ಲಿ ಮನೆ ಮನೆಗಳಲ್ಲಿ ರೋಗನಿರೋಧಕ ಶಕ್ತಿಯುಳ್ಳ ಅರಿಶಿನ ಮಿಶ್ರಿತವಾದ ಗೋಧಿ ಹಿಟ್ಟು ಅಥವಾ ರಾಗಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶ ವಿಗ್ರಹಗಳನ್ನು ಪೂಜೆ ಮಾಡಿದಲ್ಲಿ ಕುಟುಂಬದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ವರ್ಷ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಹಾಗೂ ಕೋವಿಡ್ ನಿರೋಧಕ ವಸ್ತುಗಳನ್ನು ಉಪಯೋಗಿಸಿ ಆಚರಿಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳನ್ನು ತ್ಯಜಿಸಿ ಹೂವು ಪತ್ರೆಗಳಿಂದ ಗಣಪತಿಯನ್ನು ಸಿಂಗರಿಸಲು ಬಳಸುವುದು ಹಾಗೂ ಅರಿಶಿನ ಗಣೇಶನನ್ನು ಕೂರಿಸಲು ಪೀಠವಾಗಿ ತೆಂಗಿನ ಚಿಪ್ಪಿನ ಕರಟವನ್ನು ಉಪಯೋಗಿಸಬಹುದಾಗಿದೆ. ರೋಗನಿರೋಧಕ ಪರಿಕರಣಗಳನ್ನು ಬಳಸಿ ಮನೆಯಲ್ಲಿಯೇ ಗಣೇಶನ ವಿಗ್ರಹ ಮಾಡಿ ಮನೆಯಲ್ಲೇ ವಿಸರ್ಜಿಸಿದರೆ ಸಾಮಾಜಿಕ ಅಂತರ ಕಾಪಾಡಿಕೊಂಡಂತಾಗುತ್ತದೆ.

ವಿಸರ್ಜಿತ ನೀರಿನಿಂದ ಮನೆಯನ್ನು ಶುಚಿ ಮಾಡಿಕೊಂಡರೆ ಕ್ರಿಮಿನಾಶಕವಾಗಿಯೂ ಬಳಕೆಗೆ ಬರುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸ್ವಯಂ ಸೇವಾ ಸಂಸ್ಥೆಗಳು, ಸಂಘ ಸಂಸ್ಥೆಗಳು, ನಿವಾಸಿ ಸಂಘಗಳ ಪ್ರತಿನಿಧಿಗಳ ಸಹಕಾರದೊಂದಿಗೆ ಈ ಬಾರಿ ವಿಶಿಷ್ಟ ರೀತಿಯಲ್ಲಿ ಗಣೇಶನನ್ನು ಪೂಜಿಸುವಲ್ಲಿ ಸಾರ್ವಜನಿಕರು ಮಂಡಳಿಯೊಂದಿಗೆ ಕೈಜೋಡಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ಈ ಬಾರಿ ವಿಶೇಷವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹತ್ತು ಲಕ್ಷ ಅರಿಶಿಣ ಗಣೇಶ ಮೂರ್ತಿಗಳನ್ನು ನಿಗದಿತ ಸಮಯದಲ್ಲಿ ನಿರ್ಮಿಸುವ ಗುರಿಯೊಂದಿಗೆ ಅಭಿಯಾನವನ್ನು ಆರಂಭಿಸಿದ್ದು, ಈ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನಕ್ಕೆ ತಾವೆಲ್ಲವೂ ಕೈಜೋಡಿಸಬೇಕೆಂದು ವಿನಂತಿಸಿದ್ದಾರೆ.

ಸೆಪ್ಟೆಂಬರ 8 ರಂದು ಬೆಳಗ್ಗೆ 6 ರಿಂದ ಸೆಪ್ಟೆಂಬರ 10ರ ಸಂಜೆ 6 ಗಂಟೆವರೆಗೆ ಸಾರ್ವಜನಿಕರು ತಯಾರಿಸಿದ ಅರಿಶಿಣ ಗಣೇಶನ ಛಾಯಾಚಿತ್ರವನ್ನು ಮಂಡಳಿಯ ಜಾಲತಾಣ kspcb.karnataka.gov.in,  YouTube@kspcbkarnataka, facebook@kspcbofficial, Twitter@karnatakakspcb, Instagram :kspcb_officeal ಗೆ ಕಳುಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ