NEWSಆರೋಗ್ಯನಮ್ಮರಾಜ್ಯ

ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸರ್ಕಾರ ತೀವ್ರ ನಿಗಾ: ಸಚಿವ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್ ರೂಪಾಂತರ ತಳಿಯನ್ನಲಾದ ಡೆಲ್ಟಾ ಪ್ಲಸ್ ವೈರಸ್ ಮೇಲೆ ಸರ್ಕಾರ ತೀವ್ರ ನಿಗಾವಹಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಾತನಾಡಿದ ಅವರು, ದೇಶದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಮೊದಲು ಪತ್ತೆಯಾಗಿದ್ದು, ದೇಶದಲ್ಲಿಯೇ 35 ರಿಂದ 40 ಡೆಲ್ಪಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಡೆಲ್ಪಾ ಮತ್ತು ಡೆಲ್ಪಾ ಪ್ಲಸ್ ಪ್ರಕರಣಗಳು ಕುರಿತಂತೆ ತೀವ್ರ ನಿಗಾ ವಹಿಸಲಾಗಿದೆ. ನಮ್ಮಲ್ಲಿ ಜಿನೋನ್ ಸೆಂಟರ್‍ಗಳಿದ್ದು, ಡೆಲ್ಟಾ ಪ್ಲಸ್ ಕುರಿತು ಹೆಚ್ಚಿನ ಅಧ್ಯಯನ ನಡೆಸಲಾಗುತ್ತಿದೆ. ಈ ವೈರಸ್‍ನ ಬೇರೆ ಬೇರೆ ಪ್ರಕಾರಗಳು ಪರಿಣಾಮ ಹಾಗೂ ಈಗಿನ ವ್ಯಾಕ್ಸಿನ್ ಬಳಕೆಗಳ ಕುರಿತಂತೆ ಅಧ್ಯಯನ ನಡೆಸಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ನಿಯಮಾವಳಿಗಳನ್ನು ಪಾಲಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾದರೂ ಮರಣ ಪ್ರಮಾಣ ಜಾಸ್ತಿ ಇದೆ. ಜಿಲ್ಲೆಯ ಮರಣ ಪ್ರಕರಣಗಳ ಆಡಿಟ್ ಮಾಡಲು ರಾಜ್ಯದ ವೈದ್ಯಕೀಯ ತಜ್ಞರ ತಂಡ ಜಿಲ್ಲೆಗೆ ಬಂದಿದೆ. ಈ ತಂಡ ನೀಡುವ ಆಡಿಟ್ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ 21 ಜನ ಕೋವಿಡ್ ರೋಗಿಗಳು ವೆಂಟಿಲೇಟರ್ ಮೇಲೆ ಇದ್ದಾರೆ. ಇವರ ಜೀವ ಉಳಿಸುವ ನಿಟ್ಟಿನಲ್ಲಿ ತೀವ್ರ ನಿಗಾವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮೂರನೇ ಅಲೆ ಆರಂಭವಾಗುವ ಮುನ್ನ ಜಿಲ್ಲೆಯಲ್ಲಿ ಗರಿಷ್ಠ ಎಚ್ಚರಿಕೆಗಳೊಂದಿಗೆ ಸಿದ್ಧತೆಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಮಕ್ಕಳ ಮೇಲೆ ಮೂರನೇ ಪ್ರಭಾವ ಬೀರುವ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜೂನ್ 25 ರಿಂದ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲು ಸೂಚನೆ ನೀಡಲಾಗಿದೆ.

ಜುಲೈ 30ರೊಳಗೆ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ನಾಳೆ ಮಕ್ಕಳ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಲಾಗುವುದು. ರಾಜ್ಯದಲ್ಲೇ ಮೊದಲು ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಗುವುದು ಎಂದರು.

ಮಕ್ಕಳ ತಪಾಸಣೆ ಸಂದರ್ಭದಲ್ಲಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಠಿಕ ಕಿಟ್, ಪೂರಕ ಆಹಾರ ಹಾಗೂ ಔಷಧಿಗಳನ್ನು ನೀಡಿ ಕೋವಿಡ್‍ನಿಂದ ರಕ್ಷಣೆ ನೀಡಲು ಆದ್ಯತೆ ನೀಡಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕನಿಷ್ಠ 30 ಹಾಗೂ ತಾಲೂಕು ಆಸ್ಪತ್ರೆಗಳಲ್ಲ್ಲಿ ತಲಾ 10 ಹಾಸಿಗೆಯ ವಿಶೇಷ ಮಕ್ಕಳ ಐಸಿಯು ವಾರ್ಡ್ ಸಿದ್ಧತೆಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ರೋಗಿಗಳಿಲ್ಲದ ಕಾರಣ ಕೋವಿಡ್ ಕೇರ್ ಸೆಂಟರ್‍ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ಈ ಕೇಂದ್ರಗಳಿಗೆ ಪೂರೈಕೆಮಾಡಲಾದ ಸಾಮಗ್ರಿಗಳನ್ನು ಕಾಯ್ದಿರಿಸಿ ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯಬಿದ್ದರೆ ಮಕ್ಕಳು ಹಾಗೂ ಪಾಲಕರಿಗಾಗಿ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?