NEWSಆರೋಗ್ಯ

ಸಚಿವ ಬಿಸಿಪಿಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯ ಅಧಿಕಾರಿ ಅಮಾನತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮಾರ್ಚ್ 2ರಂದು ಬಿ.ಸಿ. ಪಾಟೀಲ್ ಮನೆಯಲ್ಲಿಯೇ ದಂಪತಿಗೆ ವ್ಯಾಕ್ಸಿನ್‌ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿ ನೀಡಿದ್ದಕ್ಕೆ ಹಾವೇರಿಯ ಡಿಎಚ್ಒ ಕಾರಣ ಕೇಳಿ ನೋಟಿಸ್ ನೀಡಿದ್ದರು. ಈಗ ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರೀಲೋಕಚಂದ್ರ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೊರೊನಾ ಲಸಿಕೆ ಹಂಚಿಕೆ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಿದ ಆಸ್ಪತ್ರೆಗಳಲ್ಲೇ ಲಸಿಕೆಯನ್ನು ನೀಡಬೇಕು. ಆದರೆ ಇಲ್ಲಿ ನಿಯಮ ಉಲ್ಲಂಘನೆ ಆಗಿತ್ತು ಟಿಎಚ್‌ಒ ಡಾ.ಮಂಕಾದಾರ್‌ ಸೂಚನೆಯಂತೆ ಹೊರಗೆ ತಂದು ಸಚಿವರ ಮನೆಗೆ ತೆರಳಿ ತಾಲೂಕು ಆಸ್ಪತ್ರೆ ಸಿಬ್ಬಂದಿ ಲಸಿಕೆ ಹಾಕಿದ್ದರು.

ಸಚಿವರ ಮನೆಗೆ ತೆರಳಿ ಲಸಿಕೆ ನೀಡಿದ ಸಂಬಂಧ ಡಾ. ಮಂಕಾದಾರ್‌ ಅವರಿಗೆ ಕಾರಣ ಕೇಳಿ ಡಾ.ರಾಜೇಂದ್ರ ದೊಡ್ಡಮನಿ ಮಾರ್ಚ್ 2ರಂದು ನೋಟಿಸ್ ಜಾರಿ ಮಾಡಿದ್ದರು. ಸಚಿವರು ತಾಲೂಕಿನ ಪ್ರಥಮ ಪ್ರಜೆ ಆಗಿದ್ದಾರೆ.

ಅವರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಸಚಿವರ ಕರೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಅವಶ್ಯಕ ತುರ್ತುಸೇವೆ ಆಂಬುಲೆನ್ಸ್ ಹಾಗೂ ಔಷಧಗಳೊಂದಿಗೆ ಸಚಿವರಿಗೆ ಲಸಿಕೆಯನ್ನು ನೀಡಿ ನಂತರ 30 ನಿಮಿಷಗಳವರೆಗೆ ನಿಗಾ ವಹಿಸಲಾಗಿದ್ದು ಇನ್ನುಮುಂದೆ ಕೋವಿಡ್‌-19 ಮಾರ್ಗಸೂಚಿ ಪ್ರಕಾರ ಸಾರ್ವಜನಿಕರಿಗೆ ಲಸಿಕೆ ನೀಡುತ್ತೇವೆ ಎಂದು ಉತ್ತರ ನೀಡಿದ್ದರು.

ಮನೆಯಲ್ಲಿ ಲಸಿಕೆ ಹಾಕಿಸಿ ಕೊಂಡಿದ್ದನ್ನು ಬಿಸಿ ಪಾಟೀಲ್ ಸಮರ್ಥಿಸಿಕೊಂಡಿದ್ದರು. ಇದು ದೊಡ್ಡ ವಿಷಯವೇನಲ್ಲ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು. ಅಲ್ಲದೇ ನಾವೇನು ಅಪರಾಧ ಮಾಡಿದ್ದೇವೆ, ಕಳ್ಳತನ ಮಾಡಿದ್ದೀವಾ. ಅಷ್ಟಕ್ಕೂ ನಾನು ಸರಕಾರದ ಒಂದು ಭಾಗ. ನಾನು ಮನೆಯಲ್ಲಿಯೇ ಲಸಿಕೆ ಹಾಕಿಸಿ ಕೊಂಡು ಮಾದರಿಯಾಗಿ ಇದ್ದೇನೆ. ಈ ವಿಷಯ ಎಲ್ಲರಿಗೂ ತಿಳಿಯಿತು. ಇದರಿಂದ ಇನ್ನಷ್ಟು ಮಂದಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಾರೆ ಎಂದಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ