CrimeNEWSಆರೋಗ್ಯ

ಸರ್ಕಾರಿ ಆಸ್ಪತ್ರೆಯಲ್ಲೇ ಅದು ಹಾಡಹಗಲೇ ಆರೋಗ್ಯಾಧಿಕಾರಿಯ ಕಾಮದಾಟ ಬಯಲು

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಸರ್ಕಾರಿ ಆಸ್ಪತ್ರೆ ವೈದ್ಯನೊಬ್ಬ ತನ್ನ ಕಾಮ ತೃಷೆಗಾಗಿ ಮಹಿಳಾ ಸಿಬ್ಬಂದಿಯ ಪೀಡಕನಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಕಾಮುಕ ಹೇಳಿದಂತೆ ಕೇಳದ ಮಹಿಳಾ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದ ಎಂದು ನೊಂದ ಸಿಬ್ಬಂದು ಅಳಲು ತೋಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ಎಂಬ ಕಾಮುಕನ ಕಾಮಪುರಾಣ ಸದ್ಯ ಬಯಲಾಗಿದ್ದು, ಈ ಮಹಿಳಾ ಪೀಡಕನ ಕಿರುಕುಳದಿಂದ ಪಾರುಮಾಡುವಂತೆ ಸಿಬ್ಬಂದಿ ಇಲಾಖೆ ಸಚಿವರಿಗೆ ಮನವಿ ಮಾಡುತ್ತಿದ್ದಾರೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಆಸ್ಪತ್ರೆಯಲ್ಲಿರುವ 9 ಮಂದಿ ಮಹಿಳಾ ಸಿಬ್ಬಂದಿ ಜೊತೆಗೆ ರತ್ನಾಕರ್ ಅಸಭ್ಯವಾಗಿ ವರ್ತಿಸಿದ್ದಾನೆ. ತನ್ನ ತೊಡೆಯ ಮೇಲೆ ಓರ್ವ ಮಹಿಳೆಯನ್ನು ಕೂರಿಸಿಕೊಂಡಿದ್ದಾನೆ. ಮತ್ತೊಬ್ಬ ಮಹಿಳಾ ಸಿಬ್ಬಂದಿ ಮೂಲಕ ರತ್ನಾಕರ್ ಪಾದ ಸೇವೆ ಮಾಡಿಕೊಂಡಿದ್ದಾನೆ. ಇಬ್ಬಿಬ್ಬರು ಮಹಿಳಾ ಸಿಬ್ಬಂದಿಯನ್ನು ಕೂರಿಸಿಕೊಂಡು ರತ್ನಾಕರ್ ಆಸ್ಪತ್ರೆಯಲ್ಲಿಯೇ ರಂಗಿನಾಟ ಆಡಿದ್ದಾನೆ.

ಸಮಾಜದಲ್ಲಿ ಒಬ್ಬ ಗೌರವಯುತ ಸ್ಥಾನದಲ್ಲಿ ಇರುವ ಈ ನೀಚ, ಸರ್ಕಾರಿ ವೈದ್ಯನಾಗಿರುವ ರತ್ನಾಕರ್ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾನೆ. ಒಂದು ವೇಳೆ ರತ್ನಾಕರ್ ಜೊತೆಗೆ ಸಿಬ್ಬಂದಿ ಸಹಕರಿಸದಿದ್ದರೆ ಆ ಸಿಬ್ಬಂದಿಯನ್ನು ಕೆಲಸದಿಂದ ತೆಗೆಸುವ ಅಥವಾ ವರ್ಗಾವಣೆ ಮಾಡಿಸುಸುವುದು ಸೇರಿದಂತೆ ಹಲವಾರು ರೀತಿಯ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ.

ಇನ್ನು ಈ ಭಯಕ್ಕೆ ಮಹಿಳಾ ಸಿಬ್ಬಂದಿ ಆತ ಹೇಳಿದಂತೆ ಕೇಳುತ್ತಿದ್ದರು ಎನ್ನಲಾಗಿದೆ. ಇಂಥ ನೀಚರನ್ನು ಮೊಸಲು ಸಮಾಜದಲ್ಲಿ ಒಳ್ಳೆ ಸ್ಥಾನವಿರುವ ಪದವಿಯಲ್ಲಿ ಮುಂದುವರಿಸಬಾರದು. ಬದಲಿಗೆ ಈತನ ಕೃತ್ಯಕ್ಕೆ ತಕ್ಕ ಶಿಕ್ಷೆ ವಿಧಿಸಿ ಜೈಲಿಗೆ ಅಟ್ಟಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಈ ರತ್ನಾಕರ್ ಮಹಿಳಾ ಸಿಬ್ಬಂದಿ ಜೊತೆ ಆಗಾಗ ಟ್ರಿಪ್ ಹೋಗುತ್ತಿದ್ದ. ಈ ಸಂದರ್ಭದಲ್ಲೂ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ರತ್ನಾಕರ್‌ ಕಿರುಕುಳದಿಂದ ನೊಂದ ಮಹಿಳೆಯರು ಆರೋಪಿ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದು, ಈತನ ರಂಗಿನಾಟ ಕಂಡರೂ ಕಾಣದಂತೆ ಮೇಲಧಿಕಾರಿಗಳು ಮತ್ತು ಸಚಿವರು ವರ್ತಿಸದೆ ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ