ಮಂಡ್ಯ: ಒಂದೇ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಒಂದು ವಾರ ಆ ಕಾಲೇಜನ್ನು ಸೀಲ್ಡೌನ್ ಮಾಡಿರುವುದು ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಜರುಗಿದೆ.
ನಾಗಮಂಗಲದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಕಾಲೇಜನ್ನು ಒಂದು ವಾರ ಸೀಲ್ಡೌನ್ ಮಾಡಲಾಗಿದೆ.
ಈ ಕಾಲೇಜಿನಲ್ಲಿ 412 ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಸೋಂಕು ತಗುಲಿರುವ ವಿದ್ಯಾರ್ಥಿನಿಯರನ್ನು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರನ್ನು ಹಾಗೂ ಉಪನ್ಯಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.