ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರಿಗೆ ವೈದ್ಯರು ಸಲಹೆ ನೀಡಿದ್ದು, ಅದರಂತೆ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ ಮಂಗಳವಾರ ಮತ್ತು ಬುಧವಾರ ನಿಗದಿಯಾಗಿದ್ದ ಅವರ ಕಾರ್ಯಕ್ರಮಗಳು ರದ್ದಾಗಿವೆ.
ಇನನು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ. ಈ ಹಿಂದೆ ಅವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು.