NEWSಆರೋಗ್ಯದೇಶ-ವಿದೇಶವಿಜ್ಞಾನ

ಪಾಕ್ ಅಣ್ವಸ್ತ್ರ ಪಿತಾಮಹ ಭೋಪಾಲ್‌ ಮೂಲದ ವಿಜ್ಞಾನಿ ಎ.ಕೆ.ಖಾನ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಇಸ್ಲಾಮಾಬಾದ್: ಪಾಕಿಸ್ತಾನದ ಹಿರಿಯ ಪರಮಾಣು ವಿಜ್ಞಾನಿ ಡಾ.ಅಬ್ದು ಲ್ ಖಾದೀರ್ ಖಾನ್ (85)  ಇಸ್ಲಾಮಾಬಾದ್‌ನಲ್ಲಿ ಭಾನುವಾರ ನಿಧನರಾದರು.

ಎ.ಕೆ ಖಾನ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆ ಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ, ಭಾನುವಾರ ಮುಂಜಾನೆ ಕೊನೆಯುಸಿರೆಳೆದರು ಎಂದು ‘ರೇಡಿಯೋ ಪಾಕಿಸ್ತಾನ’ದ ಮಾಹಿತಿ ಉಲ್ಲೇ ಖಿಸಿ ಸುದ್ದಿ ಮಾಧ್ಯಮ ‘ದಿ ಡಾನ್’ ವರದಿಮಾಡಿದೆ.

1936ರಲ್ಲಿ ಭಾರತದಭೋಪಾಲ್ನಲ್ಲಿ ಜನಿಸಿದ ಎ.ಕೆ ಖಾನ್, ವಿಭಜನೆಯ ನಂತರ 1947ರಲ್ಲಿ ತಮ್ಮ ಕುಟುಂಬದೊಂದಿಗೆ ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು.

ಎ.ಕೆ ಖಾನ್ ಕೋವಿಡ್-19 ಹಿನ್ನೆ ಲೆಯಲ್ಲಿ ಆಗಸ್ಟ್ 26 ರಂದು ‘ಖಾನ್ ರಿಸರ್ಚ್ ಲ್ಯಾಬೋರೇಟರೀಸ್ ಆಸ್ಪತ್ರೆಗೆ ದಾಖಲಾಗಿದ್ದ ರು. ನಂತರ, ಅವರನ್ನು ರಾವಲ್ಪಿಂ ಡಿಯ ಮಿಲಿಟರಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.

ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿ ಪ್ರಧಾನಿಯಾಗಲಿ ಅವರ ಸಂಪುಟ ಸಹೋದ್ಯೋ ಗಿಗಳಾಗಲಿ ತಮ್ಮ ಆರೋಗ್ಯ ವಿಚಾರಿಸಲಿಲ್ಲ ಎಂದು ಖಾನ್ ಕಳೆದ ತಿಂಗಳು ಆರೋಪಿಸಿದ್ದರು.

ಪಾಕಿಸ್ತಾನದ ಅಣ್ವ ಸ್ತ್ರ ಪ್ರ ಸರಣದಲ್ಲಿನ ತಮ್ಮ ಪಾತ್ರ ದ ಕುರಿತು ಖಾನ್ 2004ರಲ್ಲಿ ಬಹಿರಂಗವಾಗಿಯೇ ಘೋಷಿಸಿಕೊಂಡಿದ್ದರು. ಖಾನ್ ಅವರನ್ನು ಪಾಕಿಸ್ತಾನದ ಅಣ್ವಸ್ತ್ರ ಯೋಜನೆ ಪಿತಾಮಹ ಎಂದು ಕರೆಯಲಾಗುತ್ತದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ