Please assign a menu to the primary menu location under menu

NEWSಆರೋಗ್ಯನಮ್ಮರಾಜ್ಯ

ಓಮಿಕ್ರಾನ್ ಸೋಂಕು ತಡೆಗೆ ರಾಜ್ಯದಲ್ಲಿ ಮಾರ್ಗ ಸೂಚಿ ಬಿಡುಗಡೆ : ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಓಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತ ಪರಿಣತರು ಮತ್ತು ಹಿರಿಯ ಅಧಿಕಾರಿಗಳ ಸಭೆಯ ಮುಖ್ಯಾಂಶಗಳನ್ನು ಕಂದಾಯ ಸಚಿವ ಆರ್‌. ಅಶೋಕ್‌ ವಿವರಿಸಿದ್ದಾರೆ.

ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್‌ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ mild symptoms ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ತಿಳಿಸಿರುವುದಾಗಿ ಹೇಳಿದರು.

ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್‌ಸಿಬಿಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು. ಅದಾಗ್ಯೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗಿಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.

ಓಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರು ಮತ್ತು ಸರ್ಕಾರಿ ನೌಕರರಿಗೆ 2 ಡೋಸ್‌ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗಿದೆ.

ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.

ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಜ.15ರವರೆಗೂ ಅವಕಾಶವಿಲ್ಲ. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗಿದೆ.

ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಅಶೋಕ್‌ ವಿವರಿಸಿದರು.

ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು. ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಸಂಪರ್ಕಿತರ ಪತ್ತೆಯ ಪ್ರಮಾಣ ಹೆಚ್ಚುವುದು. ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಓಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುದ್ಯರು ಕಂಡು ಬಂದಿರುವ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಬೆಂಗಳುರಿಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ. ರಾಜ್ಯದಲ್ಲಿ ಯಾವರಿತಿ ಮಾರ್ಗಸೂಚಿ ಇದೆಯೋ ಅದೇ ರೀತಿ ಇಲ್ಲಿಯು ಇರಲಿದೆ ಎಂದು ಆರ್‌. ಅಶೋಕ್‌ ಮಾಧ್ಯಗಳಿಗೆ ತಿಳಿಸಿದರು.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂಸ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ