NEWSಆರೋಗ್ಯನಮ್ಮರಾಜ್ಯ

ವೈದ್ಯರೇ ಕೊರೊನಾ ಲಸಿಕೆ ವಿರುದ್ಧ ಅರ್ಜಿ ಹಾಕಿರುವುದು ಆಘಾತಕಾರಿ: ಹೈ ಕೋರ್ಟ್‌ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್‌ ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ. ಹೀಗಾಗಿ ಲಸಿಕೆ ಹಾಕಿಸಿಕೊಂಡು ಶಾಲಾ ಮಕ್ಕಳು ತರಗತಿಗೆ ಹಾಜರಾಗಿ ಎಂದು ರಾಜ್ಯ ಹೈ ಕೋರ್ಟ್‌ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸಲಹೆ ನೀಡಿದ್ದಾರೆ.

ಆಯುರ್ವೇದ ಕಾಲೇಜಿನಲ್ಲಿ ಲಸಿಕೆ ಕಡ್ಡಾಯ ಪ್ರಶ್ನಿಸಿ ಡಾ. ಶ್ರೀನಿವಾಸ ಕಕ್ಕಿಲಾಯ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದು,​​ ಆ ಅರ್ಜಿಯನ್ನು ಇಂದು ಕೈಗೆತ್ತಿಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸ್ವತಃ ವೈದ್ಯರಾದವರೇ ಇಂತಹ ಪಿಐಎಲ್ ಹಾಕಿರುವುದು ಆಘಾತಕಾರಿ. ಪೋಲಿಯೋ ಲಸಿಕೆಗೂ ಹೀಗೆಯೇ ವಿರೋಧ ಮಾಡಲಾಗಿತ್ತು. ಆದರೆ ವಿರೋಧ ಮಾಡಿದ ದೇಶಗಳಲ್ಲೇ ಪೋಲಿಯೋ ಇನ್ನೂ ಉಳಿದುಕೊಂಡಿದೆ ಎಂದು ಹೇಳಿದರು.

ಇನ್ನು ಲಸಿಕೆ ಇರುವುದು ಮನುಕುಲದ ಉಳಿವಿಗಾಗಿ ಎಂದು ಅಭಿಪ್ರಾಯಪಟ್ಟ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಅವರು ಶಾಲಾ ಮಕ್ಕಳು ಲಸಿಕೆ ಹಾಕಿಸಿಕೊಂಡು ತರಗತಿಗೆ ಹಾಜರಾಗಬೇಕು ಎಂದು ಸಲಹೆ ನೀಡಿ ಬಳಿಕ ಈ ಪ್ರಕರಣದ ವಿಚಾರಣೆಯನ್ನು ಕೋವಿಡ್​ಗಾಗಿ ಇರುವ ಪ್ರತ್ಯೇಕ ಪೀಠಕ್ಕೆ ವರ್ಗಾವಣೆ ಮಾಡಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ