Vijayapatha – ವಿಜಯಪಥ
Saturday, November 2, 2024
NEWSಆರೋಗ್ಯನಮ್ಮಜಿಲ್ಲೆ

ಸಾಮಾಜಿಕ ಅಂತರ, ಮಾಸ್ಕ್ ಧರಿಸದಿದ್ದರೆ ದಂಡ ಹಾಕಲು ರಸ್ತೆಗಿಳಿಯಲಿವೆ 54 ತಂಡಗಳು

ಬಿಬಿಎಂಪಿ ಮುಖ್ಯ ಆಯುಕ್ತ, ನಗರ ಪೊಲೀಸ್ ಆಯುಕ್ತರಿಂದ ಕೋವಿಡ್ ನಿಯಮ ಪಾಲನೆ ಕುರಿತು ಸಮನ್ವಯ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್ ನಿಯಮಗಳಾದ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ಮೇಲೆ ದಂಡ ವಿಧಿಸುವ ಸಲುವಾಗಿ 54 ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಿಬಿಎಂಪಿ ಕೋವಿಡ್-19 ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇಂದು ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮನ್ವಯ ಸಭೆಯಲ್ಲಿ ಮಾತನಾಡಿ, ಒಂದು ತಂಡದಲ್ಲಿ 4 ಜನ ಮಾರ್ಷಲ್‌ಗಳಿರುತ್ತಾರೆ. ಅವರು ಹೆಚ್ಚು ಜನದಟ್ಟಣೆಯಿರುವ ಸ್ಥಳಗಳಿಗೆ ತೆರಳಿ ನಿಯಂತ್ರಣ ಮಾಡುತ್ತಾರೆ.

ಅಲ್ಲದೆ ಕೋವಿಡ್ ನಿಯಮಗಳನ್ನು ಪಾಲಿಸದೆ ಹೆಚ್ಚು ಉಲ್ಲಂಘನೆಯಾಗುವ ಸ್ಥಳಗಳಲ್ಲಿ ವಲಯ ಹಿರಿಯ ಅಧಿಕಾರಿಗಳು, ಆರೋಗ್ಯಾಧಿಕಾರಿ, ಆರೋಗ್ಯವೈದ್ಯಾಧಿಕಾರಿಗಳ ತಂಡವು ಸ್ಥಳ ಪರಿಶೀಲನೆ ನಡೆಸಿ ನೋಟಿಸ್ ನೀಡಿ ಬೀಗಮುದ್ರೆ ಹಾಕುವ ಕೆಲಸ ಮಾಡಿದಾಗ ನಾಗರಿಕರು ಕೋವಿಡ್ ನಿಯಮಗಳನ್ನು ಪಾಲಿಸುತ್ತಾರೆ ಎಂದರು.

ಮುಂದಿನ ದಿನಗಳಲ್ಲಿ ನಗರದಲ್ಲಿ ಎಲ್ಲಾ ವಹಿವಾಟುಗಳಿಗೆ ವಿನಾಯಿತಿ ಸಿಗಲಿದ್ದು, ಪಾಲಿಕೆ ಮೇಲೆ ಹೆಚ್ಚು ಜವಾಬ್ದಾರಿ ಬರುತ್ತದೆ. ಈ ವೇಳೆ ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲಿಸಿಬೇಕಾಗುತ್ತದೆ. ಮಾರ್ಷಲ್‌ಗಳು, ಹೋಮ್ ಗಾರ್ಡ್ ಗಳ ಜತೆಗೆ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರನೆ ನಡೆಸಿ ಕೋವಿಡ್ ನಿಯಮಗಳನ್ನು ಪಾಲಿಸಲು ನಾಗರಿಕರಿಗೆ ತಿಳಿವಳಿಕೆ ನೀಡಬೇಕು. ಎಲ್ಲೆಲ್ಲಿ ಕೋವಿಡ್ ನಿಯಮಗಳು ಪಾಲಿಸುತ್ತಿಲ್ಲ ಅಲ್ಲಿ ದಂಡ ವಿಧಿಸುವ ಕೆಲಸ ಆಗಬೇಕು ಎಂದು ಹೇಳಿದರು.

ನಗರದಲ್ಲಿ ಕೋವಿಡ್‌ನಿಂದ ಸಾಕಷ್ಟು ಸವಾಲುಗಳನ್ನು ಎದುರಿಸಲಾಗಿದ್ದು, ವೈದ್ಯಕೀಯ ವ್ಯವಸ್ಥೆಯಲ್ಲಿ ವೈದ್ಯರು, ದಾದಿಯರು ಹಾಗೂ ಇನ್ನಿತರ ಸಿಬ್ಬಂದಿಯ ಕಾರ್ಯವೈಖರಿಯ ಜತೆಗೆ ಲಾಕ್‌ಡೌನ್ ಮಾಡಿದ್ದ ಹಿನ್ನೆಲೆ ಕೋವಿಡ್ ಸೋಂಕನ್ನು ಹತೋಟಿಗೆ ತರಲಾಗಿದೆ. ಈ ಸಂಬಂಧ ಕೋವಿಡ್ ನಿಯಂತ್ರಣದಲ್ಲಿರಬೇಕಾದರೆ ಎಲ್ಲಾ ನಾಗರಿಕರು ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದರು.

ನಗರದ ಸಾರ್ವಜನಿಕ ಸ್ಥಳ, ವಹಿವಾಟು ನಡೆಯುವ ಸ್ಥಳ, ಮದುವೆ ಸಮಾರಂಭ, ಮಾರುಕಟ್ಟೆ ಪ್ರದೇಶಗಳಲ್ಲಿ ಕೋವಿಡ್ ನಿಯಮಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕೋವಿಡ್ ನಿಯಮಗಳನ್ನು ಪಾಲಿಸಿದಾಗ ಮಾತ್ರ ಎಲ್ಲರೂ ಸುರಕ್ಷಿತವಾಗಿರಲು ಸಾಧ್ಯ ಎಂದು ತಿಳಿಸಿದರು.

ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆ
ಬಿಬಿಎಂಪಿ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಪಾದಚಾರಿಗಳಿಗೆ ಯಾವುದೇ ತೊಂದರೆಯಾಗದ ರೀತಿ ಸುಗಮ ಸಂಚಾರಕ್ಕೆ ಅವಕಾಶವಿರಬೇಕು. ಆದರೆ, ನಗರದ ಬಹುತೇಕ ಕಡೆ ಪಾದಚಾರಿ ಮಾರ್ಗಗಳಲ್ಲಿ ವಾಹನಗಳ ಪಾರ್ಕಿಂಗ್, ತಳ್ಳುವ ಗಾಡಿಗಳ ಮೂಲಕ ವ್ಯಾಪಾರ, ಕಟ್ಟಡ ನಿರ್ಮಾಣ ಸಾಮಗ್ರಿಗಳು ಸೇರಿದಂತೆ ಇನ್ನಿತರೆ ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಈ ಸಂಬಂಧ ಪಾಲಿಕೆ ಅಧಿಕಾರಿಗಳ ಜತೆಗೆ ಪೊಲೀಸ್ ಸಿಬ್ಬಂದಿ ಸಹಕರಿಸಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಆಗಬೇಕಿದೆ ಎಂದರು.

ಅದಕ್ಕೆ ನಗರ ಪೋಲೀಸ್ ಆಯುಕ್ತ ಕಮಲ್ ಪಂಥ್ ಪ್ರತಿಕ್ರಿಯಿಸಿ, ಪೊಲೀಸ್ ಸಿಬ್ಬಂದಿ ಹಲವು ಕಡೆ ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅದಲ್ಲದೆ ಪಾದಚಾರಿ ಒತ್ತುವರಿ ತೆರವು ಕಾರ್ಯಾಚರನೆಗೆ ಪಾಲಿಕೆಯ ಜತೆಗೆ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಕೋವಿಡ್ ಸೋಂಕು ತಡೆಯಲು ಹಲವು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುವ ವೇಳೆ ವಾಗ್ವಾದ/ಹಲ್ಲೆ ನಡೆದರೆ, ಪೊಲೀಸ್ ಸಿಬ್ಬಂದಿಯು ಭದ್ರತೆ ಕಲ್ಪಿಸುವ ಜತೆಗೆ ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನು ಜಾರಿ ತರುವಾಗ ನಾಗರಿಕರ ಜತೆ ವಾಗ್ವಾದ ಆಗುತ್ತದೆ, ಆಗ ತಾಳ್ಮೆಯಿಂದ ವರ್ತಿಸಬೇಕಾಗುತ್ತದೆ. ಮಾರ್ಷಲ್‌ಗಳ ಜತೆ ಪೊಲೀಸ್ ಸಿಬ್ಬಂದಿಯು ಕೈಜೋಡಿಸಿ ಪರಿಣಾಮಕಾರಿಯಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆದರೆ ಕೋವಿಡ್ ಸೋಂಕು ಇನ್ನು ಹಾಗೆಯೇ ಇದೆ. ಆದ್ದರಿಂದ ಎಲ್ಲಾ ನಾಗರಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ವಿಶೇಷ ಆಯುಕ್ತ (ಘನತ್ಯಾಜ್ಯ) ಡಾ. ಹರೀಶ್ ಕುಮಾರ್, ವಿಶೇಷ ಆಯುಕ್ತ (ಆರೋಗ್ಯ) ಡಿ.ರಂದೀಪ್, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಜಂಟಿ ಆಯುಕ್ತ (ಘನತ್ಯಾಜ್ಯ) ಸರ್ಫರಾಜ್ ಖಾನ್, ಎಲ್ಲಾ ವಲಯ ಜಂಟಿ ಆಯುಕ್ತರು ಮತ್ತು ಮುಖ್ಯ ಇಂಜಿನಿಯರ್‌ಗಳು, ಮಾರ್ಷಲ್ ಮೇಲ್ವಿಚಾರಕರು, ಮಾರ್ಷಲ್‌ಗಳು ಹಾಗೂ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ