NEWSಆರೋಗ್ಯನಮ್ಮರಾಜ್ಯ

ಓಮಿಕ್ರಾನ್ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ : ಇಂದು ಸಿಎಂ ಮಹತ್ವದ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಅವರು ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಓಮಿಕ್ರಾನ್ ನಿಯಂತ್ರಣಕ್ಕೆ ಅಗತ್ಯ ನಿರ್ಬಂಧಗಳು ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಹೊಸ ರೂಪಾಂತರದ ಸೋಂಕು ಹರಡುವಿಕೆಯನ್ನು ತಡೆಯಲು ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ತಜ್ಞರೊಂದಿಗೆ ತುರ್ತು ಸಭೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ನಮಗೆ ತಿಳಿದುಬಂದಿರುವ ಮಾಹಿತಿ ಪ್ರಕಾರ ಹೊಸ ರೂಪಾಂತರಿ ಸೋಂಕು ಹರಡಿದರೂ ಸೋಂಕಿನಿಂದ ಆಸ್ಪತ್ರೆಗೆ ಸೇರಿಸುವ ಪರಿಸ್ಥಿತಿಗಳು ಎದುರಾಗುವುದಿಲ್ಲ. ಆದರೂ ನಾವು ವೈದ್ಯಕೀಯ ವರದಿ ಬಂದ ಕೂಡಲೇ ನಿಯಮಗಳಂತೆಯೇ ಚಿಕಿತ್ಸೆಗಳನ್ನು ನೀಡಲು ಕ್ರಮಗಳನ್ನು ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

ಇನ್ನು ಸೋಂಕು ಹರಡುವಿಕೆಯನ್ನು ತಡೆಯಲು ಹೊಸ ಮಾರ್ಗಸೂಚಿಗಳ ಅವಶ್ಯಕತೆಯಿದೆ. ಆ ಬಗ್ಗೆ ಸಭೆಯ ನಂತರ ನಿರ್ಧರಿಸಲಾಗುತ್ತದೆ. ಸೋಂಕಿತರ ವೈದ್ಯಕೀಯ ವರದಿ ಶುಕ್ರವಾರ ನಮ್ಮ ಕೈ ಸೇರಲಿದ್ದು, ವರದಿಯನ್ನು ಪರಿಶೀಲಿಸಿದ ಬಳಿಕ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಕುರಿತು ಸ್ಪಷ್ಟ ಮಾಹಿತಿಗಳು ನೀಡಲಾಗುವುದು ಎಂದರು.

ಗುರುವಾರ ಸಿಎಂ ಬೊಮ್ಮಾಯಿ ಅವರು ಮಾಂಡವಿಯಾ ಅವರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದರು. ಓಮಿಕ್ರಾನ್ ಸೋಂಕು ಪತ್ತೆಯಾಗುವುದಕ್ಕೂ ಮುನ್ನ ಹಾಗೂ ಸೋಂಕು ಪತ್ತೆಯಾದ ಬಳಿಕ ಎರಡು ಬಾರಿ ಮಾತುಕತೆ ನಡೆಸಿದರು. ಈ ವೇಳೆ ಓಮಿಕ್ರಾನ್ ಸೋಂಕು ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಕೇಂದ್ರ ಆರೋಗ್ಯ ಸಚಿವರಿಂದ ಶ್ಲಾಘನೆ: ನಾವು ಬಹಳ ಎಚ್ಚರಿಕೆಯಿಂದ ಹಾಗೂ ಜಾಗರೂಕರಾಗಿದ್ದೇವೆ. ಓಮಿಕ್ರಾನ್ ನಂತರ ಹೊಸ ತಳಿಗಳು ಎಲ್ಲೆಲ್ಲಿ ಕಂಡುಬಂದರೂ ಸೋಂಕಿತರ ಸಂಪರ್ಕಗಳನ್ನು ಪತ್ತೆಹಚ್ಚುವುದು ನಮ್ಮ ಕರ್ತವ್ಯವಾಗಿದೆ. ನಾವು ಈಗಾಗಲೇ ಅದರಲ್ಲಿ ಮುಂದೆ ಇದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದೇ ವೇಳೆ ಹೊಸ ರೂಪಾಂತರದ ಪ್ರಕರಣಗಳನ್ನು ವರದಿ ಮಾಡುತ್ತಿರುವ ದೇಶಗಳಿಂದ ಅಂತಾರಾಷ್ಟ್ರೀಯ ವಿಮಾನಯಾನವನ್ನು ನಿಷೇಧಿಸಬೇಕೆಂದು ಕೆಲವು ರಾಜ್ಯಗಳು ಒತ್ತಾಯಿಸುತ್ತಿರುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ಕುರಿತು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವರು ರಾಜ್ಯದಲ್ಲಿನ ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಅಭಿಯಾನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಲಸಿಕೆ ಅಭಿಯಾನದಲ್ಲಿನ ವೇಗವನ್ನು ಇದೇ ರೀತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆಂದು ಹೇಳಿದರು.

ಲಸಿಕೆ ಅಭಿಯಾನ ಮುಂದುವರಿಸಲು ನಮ್ಮಲ್ಲಿ ಸಾಕಷ್ಟು ಲಸಿಕೆಗಳಿವೆ. ನಮ್ಮ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು, ತಜ್ಞರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಂತರ ಈ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗುತ್ತದೆ ಎಂದಿದ್ದಾರೆ.

ಡೆಲ್ಟಾಗಿಂತ ಓಮಿಕ್ರಾನ್ ಭಿನ್ನವಾಗಿದೆಯೇ? ಡೆಲ್ಟಾ ಸೋಂಕಿನಿಂತಯೇ ಓಮಿಕ್ರಾನ್ ಸೋಂಕಿತರಲ್ಲು ವಿಪರೀತ ದಣಿವು ಮತ್ತು ದೇಹದ ನೋವು, ವಾಸನೆ ಅಥವಾ ರುಚಿ ತಿಳಿಯದಿರುವ ಲಕ್ಷಣಗಳು ಕಂಡು ಬರುತ್ತಿವೆ. ರುಚಿ ಅಥವಾ ವಾಸನೆ ತಿಳಿಯದಿರುವುದು ಮತ್ತು ಕಡಿಮೆ ಆಮ್ಲಜನಕವು ಡೆಲ್ಟಾದ ಲಕ್ಷಣಗಳಾಗಿವೆ.

ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ ಓಮಿಕ್ರಾನ್ ಸೋಂಕಿನ ಲಕ್ಷಣಗಳು ಭಿನ್ನವಾಗಿಲ್ಲ ಇಂದು ಹೇಳಿದರೆ, ದಕ್ಷಿಣ ಆಫ್ರಿಕಾದ ವೈದ್ಯರು ಹೆಚ್ಚಿನ ಓಮಿಕ್ರಾನ್ ರೋಗಿಗಳಿಗೆ ತೀವ್ರವಾದ ಆಯಾಸ, ದೇಹದ ನೋವು, ಜೊತೆಗೆ ನೋಯುತ್ತಿರುವ ಗಂಟಲು, ಒಣ ಕೆಮ್ಮು ಮತ್ತು ಜ್ವರದಂತಹ ಸೌಮ್ಯ ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC