NEWSಆರೋಗ್ಯನಮ್ಮಜಿಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಡಿ. 01ರಂದು ವಿಶ್ವ ಏಡ್ಸ್ ದಿನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾಮಾಂತರ: “ಅಸಮಾನತೆ, ಏಡ್ಸ್ ಮತ್ತು ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ” ಘೋಷವಾಕ್ಯದಡಿ “ವಿಶ್ವ ಏಡ್ಸ್ ದಿನ-2021” ಅನ್ನು 2021ರ ಡಿಸೆಂಬರ್ 01 ರಂದು ಬೆಳಗ್ಗೆ 10.30ಕ್ಕೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲೆಯ ಇತರೆ ಸರ್ಕಾರಿ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಯೋಜನಾ ನಿರ್ದೇಶಕರಾದ ಕೆ.ಲೀಲಾವತಿ ಉದ್ಘಾಟಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಅವರ ಘನ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯ ಈ.ರವಿಕುಮಾರ್, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಉಪ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಕೀಲಾ ಎನ್.,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎ.ತಿಪ್ಪೇಸ್ವಾಮಿ, ದೇವನಹಳ್ಳಿಯ ಆಕಾಶ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಕಮ್ಯುನಿಟಿ ಮೆಡಿಸನ್ ಮುಖ್ಯಸ್ಥ ಡಾ.ಸುನಿಲ್ ಕುಮಾರ್ ದೊಡ್ಡೇರಿ, ಬೆಂಗಳೂರಿನ ಎಸ್.ವಿ.ವೈ.ಎಂ. ನ ತಾಂತ್ರಿಕ ನಿರ್ದೇಶಕ ಡಾ. ಎಚ್‌.ಜೆ.ದೀಪಕ್ ಮೂರ್ತಿ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಅಧ್ಯಕ್ಷ ಡಾ.ಹುಲಿಕಲ್ ನಟರಾಜ್, ಡ್ಯಾಪ್ಕೂ ಮತ್ತು ಕ್ಷಯ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಎಸ್.ನಾಗೇಶ್ ಭಾಗವಹಿಸಲಿದ್ದಾರೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...