NEWSದೇಶ-ವಿದೇಶನಮ್ಮರಾಜ್ಯ

ಉತ್ತರ ಖಂಡದಲ್ಲಿ ಭಾರಿ ಹಿಮಸ್ಫೋಟ: 150ಕ್ಕೂ ಹೆಚ್ಚು ಮಂದಿ ನಾಪತ್ತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಡೆಹರಾಡೂನ್:  ಸಂಭವಿಸಿದ್ದು ನೈಸರ್ಗಿಕ ವಿಕೋಪ ಕೇಂದ್ರ ಹಲವು ಜಿಲ್ಲೆಗಳಲ್ಲಿ ಈ ಭಾರಿ ಪ್ರವಾಹ ಕುರಿತು  ಹೈ ಅಲರ್ಟ್ ಘೋಷಣೆ ಮಾಡಿದೆ.

ಉತ್ತರಖಂಡದ ಚಮೋಲಿ ಜಿಲ್ಲೆಯ ರೈನಿ ಗ್ರಾಮದಲ್ಲಿ ಹಿಮ ಸ್ಪೋಟಗೊಂಡಿದ್ದು ಹಿಮನದಿ ಸ್ಫೋಟದಿಂದಾಗಿ  ಧೌಲಿಗಂಗಾ ನದಿಯಲ್ಲಿ ಹಿಮದ ನೀರಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹರಿದ್ವಾರ ಮತ್ತು ಋಷಿಕೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಹುಟ್ಟಿಸಿದೆ.

ಹಿಮಾನದಿ ಸ್ಫೋಟಗೊಂಡ ಮಾಹಿತಿ ಮೇರೆಗೆ ಆಡಳಿತ ತಂಡ ಸ್ಥಳಕ್ಕೆ ತೆರಳಿದ್ದು ಪೊಲೀಸರು ಧ್ವನಿವರ್ಧಕಗಳ ಮೂಲಕ ನದಿ ಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶಗಳನ್ನು ನೀಡುತ್ತಿದ್ದಾರೆ. ಅಂತೆಯೇ ಕೂಡಲೇ ತಗ್ಗುಪ್ರದೇಶ ಮತ್ತು ನದಿ ಪಾತ್ರದಲ್ಲಿರುವ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಚಮೋಲಿ, ಕರ್ಣಪ್ರಯಾಗ್ ನಲ್ಲಿ ಅಲಕಾನಂದ ನದಿ ತಟದಲ್ಲಿ ವಾಸವಿರುವ ಜನರು ಮನೆ ಖಾಲಿ ಮಾಡಲು ಮುಂದಾಗಿದ್ದಾರೆ.

ನಾಪತ್ತೆಯಾಗಿದ್ದಾರೆ 150 ಜನರು
ರೈನಿ ಗ್ರಾಮದ ಬಳಿ ಭಾರೀ ಹಿಮ ಕುಸಿತದಿಂದ ಅವಾಂತರ ಸೃಷ್ಟಿಯಾಗಿದ್ದು ಈಗಾಗಲೇ ಗಂಗಾ ನದಿ ಪ್ರವಾಹದಿಂದ ಅನೇಕ ಮನೆಗಳಿಗೆ ಹಾನಿಯಾಗಿದೆ.ಋಷಿ ಗಂಗಾ ಪವರ್ ಪ್ರಾಜೆಕ್ಟ್ ಗೂ ಹಾನಿಯಾಗಿರುಬ ಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಈವರೆಗೆ ಸುಮಾರು 150 ಜನರು ಕಾಣೆಯಾಗಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹಿಮಸ್ಪೋಟಕ್ಕೆ ತುತ್ತಾಗಿರುವ ಹಲವು ಕಾರ್ಮಿಕರು ಕೊಚ್ಚಿ ಹೋಗಿರುವ ಸಾಧ್ಯತೆ ಿದೆ ಎಂದು ಹೇಳಲಾಗುತ್ತಿದೆ.  ಸ್ಥಳಕ್ಕೆ ಎನ್‌ಡಿಆರ್‌ಎಫ್‌, ಐಟಿಬಿಪಿ ಸಿಬ್ಬಂದಿ ಆಗಮಿಸಿದ್ದಾರೆ.

ಇನ್ನು  ನದಿಪಾತ್ರದ ಗ್ರಾಮಸ್ಥರನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಜತೆಗೆ ಪ್ರವಾಹದಲ್ಲಿ 2 ಸೇತುವೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್