NEWSನಮ್ಮರಾಜ್ಯ

20 ಲಕ್ಷ ಕೋಟಿ ಪ್ಯಾಕೇಜ್ ನಿಂದ ದೇಶದಲ್ಲಿ ‌ಹೊಸ ಮನ್ವಂತರ ಪ್ರಾರಂಭ

 ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ:  ಕೇಂದ್ರ ಸರ್ಕಾರ ಕೊರೊನಾ  ಸಂದರ್ಭದಲ್ಲಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಿಂದಾಗಿ ದೇಶದಲ್ಲಿ ಹೊಸ ಮನ್ವಂತರ ಪ್ರಾರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮರ್ಥ ಹಾಗೂ ಗಟ್ಟಿ ನಾಯಕತ್ವದಿಂದಾಗಿ ದೇಶ ಕೊರೋನಾ ಸಾಂಕ್ರಾಮಿಕ ಖಾಯಿಲೆಯನ್ನು ಎದುರಿಸುವಲ್ಲಿ ಶಕ್ತವಾಗಿದೆ. ದೇಶದ 130 ಕೋಟಿ ಜನರ ಬೆಂಬಲ ಪ್ರಧಾನಿಯವರಿಗೆ ಇದೆ. ವಿಶ್ವದ ಮುಂದುವರಿದ ರಾಷ್ಟ್ರಗಳಾದ ಅಮೆರಿಕ,  ಇಂಗ್ಲೆಂಡ್, ಇಟಲಿ, ಜಪಾನ್ ಚೈನಾ ದೇಶಗಳು ಸಹ ಕೊರೊನಾ  ಅಟ್ಟಹಾಸದಿಂದ ನಲುಗಿವೆ. ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ವಿಶ್ಚದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ದೇಶದಲ್ಲಿ ಮರಣ ಪ್ರಮಾಣ ಕಡಿಮೆ ಇದೆ.   ಸೋಕಿಂತರಲ್ಲಿ ಅರ್ಧದಷ್ಟು ಜನರು ಗುಣಮುಖರಾಗುತ್ತಿದ್ದಾರೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇಡೀ ವಿಶ್ವ ಸಂಕಟದ ಪರಿಸ್ಥಿತಿ ಎದುರಿಸುತ್ತಿದೆ. ದೇಶದ ಒಟ್ಟು ಜಿಡಿಪಿಯ ಶೇ.10 ರಷ್ಟಾಗುವ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಎಲ್ಲಾ ವರ್ಗದ ಜನರನ್ನು ತಲುಪಲಿದೆ. ಹಂತ ಹಂತವಾಗಿ ಈ ಪ್ಯಾಕೇಜ್ ಜಾರಿದ ನಂತರ ದೇಶದ ಆರ್ಥಿಕತೆಯಲ್ಲಿ ಬದಲಾವಣೆಯಾಗುವುದು. ಪ್ಯಾಕೇಜ್ ಘೋಷಣೆಯುಂದಾಗಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಶೇರು ವಹಿವಾಟಿನಲ್ಲಿ ಚೇತೋಹಾರಿ ಬೆಳವಣಿಗೆ ಕಂಡುಬರುತ್ತಿದೆ ಎಂದರು.

ದೇಶದಲ್ಲಿ ಲಾಕ್ ಡೌನ್ ಸಡಲಿಕೆ ಮಾಡಿ ಕೈಗಾರಿಕೆಗಳು ಮರು ಚಾಲನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೇರೆ ರಾಜ್ಯಗಳಿಗಿಂತ ಮೊದಲೇ ಕರ್ನಾಟಕದಲ್ಲಿ ಕೈಗಾರಿಕೆ್ಳಗಳು ಪುಃನ ಪ್ರಾರಂಭಿಸಲು ಅವಕಾಶ ನೀಡಲಾಯಿತು. ಸೀಲ್ ಡೌನ್ ಹೊರತು ಪಡಿಸಿ ಇತರೆ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. ಚೈನಾ ದೇಶದ ಮೇಲೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಆಕ್ರೋಶ ಮಡುಗಟ್ಟಿದೆ. ಚೀನಾದಿಂದ ಹೊರ ಬರುವ ಉದ್ದಿಮೆಗಳು ಹಾಗೂ ಬಂಡವಾಳವನ್ನು ಕರ್ನಾಟಕ ರಾಜ್ಯದ ಕಡೆಗೆ ತರಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಕಮಿಟಿ ರಚಿಸಲಾಗಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಈಗಾಗಲೇ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಮಂತ್ರಿಗಳ ನೇತೃತ್ವದಲ್ಲಿನ ಹೈ ಲೆವಲ್ ಕಮಿಟಿ ರಚಿಸಲಾಗಿದೆ. ಈ ಕಮಿಟಿಯಲ್ಲಿ ಕೈಗಾರಿಕಾ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಯಾವುದೇ ಕಾನೂನಿನ ತೊಡಕು ಬರದ ಹಾಗೆ ಭೂಮಿ ಹಸ್ತಾಂತರ ಹಾಗೂ ವಿವಿಧ ಇಲಾಖೆಗಳ ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ವ್ಯವಸ್ಥೆ ರೂಪಿಸಲಾಗಿದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ