NEWSನಮ್ಮರಾಜ್ಯವಿಜ್ಞಾನ

ಕಷ್ಟಕ್ಕೆ ಮಿಡಿದ ಸಚಿವರಿಗೆ ಸಾರಿಗೆ ನೌಕರರಿಂದ ಕೃತಜ್ಞತೆ

ಸಾರಿಗೆ ಸಚಿವ ಲಕ್ಷ್ಮಣ ಸವದಿ ಸನ್ಮಾನಿಸಿದ ಸಂಸ್ಥೆಯ ನೌಕರರು, ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ:  ಕಳೆದ ಎರಡು ತಿಂಗಳಿನಿಂದ ಸಾರಿಗೆ ನಿಗಮಗಳಲ್ಲಿ ಯಾವುದೇ ಬಸ್ ಕಾರ್ಯಾಚರಣಿ ಆಗದೇ, ನಿಗಮದ ಆದಾಯ ಸಂಪೂರ್ಣ ಸ್ಥಗಿತಗೊಂಡು ವೇತನ ನೀಡಲು ಹಣವಿಲ್ಲದಂತಹ ಸ್ಥಿತಿಯಲ್ಲಿದ್ದ ಸಾರಿಗೆ ನಿಗಮಗಳಿಗೆ, ಇದೇ ಮೊದಲ ಬಾರಿಗೆ ಸಾರಿಗೆ ನಿಗಮಗಳ ಇತಿಹಾಸದಲ್ಲಿ  ಸರ್ಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನಕ್ಕೆ  ಏಪ್ರಿಲ್‌ ತಿಂಗಳ ವೇತನಕ್ಕೆ 322 ಕೋಟಿ ರೂ. ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಉಪಮುಖ್ಯ ಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ವೈ. ನಾಯಕ್ ಸನ್ಮಾನಿಸಿ, ಗೌರವಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷರಾದ ವಿ.ಎಸ್.ಪಾಟೀಲ ಅವರು ಕಾಳಜಿ, ಶ್ರಮವಹಿಸಿ ಮತ್ತು ಸಂಬಂಧಪಟ್ಟವರ ಜತೆಗೆ ನಿರಂತರ ಮಾತುಕತೆಯಿಂದ ಎಪ್ರಿಲ್-2020 ರ ತಿಂಗಳ ವೇತನವನ್ನು ಸರಕಾರದಿಂದ ಹಣ ಬಿಡುಗಡೆಯಾಗಿರುತ್ತದೆ. ಮುಖ್ಯಮಂತ್ರಿಗಳೊಡನೆ ನಿರಂತರ ಮಾತುಕತೆ ನಡೆಸಿ, ಪರಿಸ್ಥಿತಿಯನ್ನು ವಿವರಿಸಿ, ವೇತನಕ್ಕೆ ಹಣವನ್ನು ಬಿಡುಗಡೆಗೊಳಿಸಲು ಕಾರಣರಾದ  ಲಕ್ಷ್ಮಣ ಸವದಿ, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ  ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಈಕರಸಾಸಂ ಎಂ.ಡಿ. ಝಹೀರಾ ನಾಝಿಮ್ ಅವರಿಗೆ ನಾಲ್ಕು ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿಗಳು, ಸಿಬ್ಬಂದಿಗಳ ಪರವಾಗಿ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕೃತಜ್ಞತಾ ಪತ್ರದೊಂದಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ವಿಶೇಷ ರಜೆ ಕೋರಿಕೆ
ಕಳೆದ ಮಾ.23 ರಿಂದ ಮೇ 03 ರವರೆಗೆ ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಸಂಸ್ಥೆಯ ಅನುಸೂಚಿಗಳು ಕಾರ್ಯಾಚರಣೆಯಲ್ಲಿರದಿದ್ದರೂ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಈ ಅವಧಿಗೆ ಚಾಲನಾ ಸಿಬ್ಬಂದಿಗೆ ಮಾತ್ರ ವಿಶೇಷ ರಜೆ ಪರಿಗಣನೆಯಾಗಿದೆ. ಈ ಸೌಲಭ್ಯವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗೂ ವಿಸ್ತರಿಸಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

ವಿಮಾ ಸೌಲಭ್ಯ ಎಲ್ಲರಿಗೂ ವಿಸ್ತರಿಸಿ
 ಕರ್ತವ್ಯದ ವೇಳೆಯಲ್ಲಿ ಚಾಲಕರು ಮತ್ತು ನಿರ್ವಾಹಕರು ಕೋವಿಡ್ 19 ಪಿಡುಗಿಗೆ ತುತ್ತಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂ.ವಿಮೆ ನೀಡಲಾಗುವುದು ಎಂದು ಈಗಾಗಲೇ ಘೋಷಿಸಿರುತ್ತೀರಿ. ಮೆಕ್ಯಾನಿಕ್‍ಗಳು ಸೇರಿದಂತೆ ಸಂಸ್ಥೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಸೌಲಭ್ಯ ವಿಸ್ತರಿಸಿ ವಿಮಾ ಮೊತ್ತವನ್ನು 30 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕೋರಲಾಯಿತು.

ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಸಂಘದ ಪದಾಧಿಕಾರಿಗಳಾದ ಕಿರಣಕುಮಾರ ಬಸಾಪುರ, ವೈ.ಎಂ.ಶಿವರಡ್ಡಿ, ಎಫ್.ಸಿ. ಹಿರೇಮಠ, ವಿವೇಕಾನಂದ ವಿಶ್ವಜ್ಞ, ಬಸವಲಿಂಗಪ್ಪ ಬೀಡಿ, ಸಂತೋಷಕುಮಾರ, ನಿತಿನ್ ಹೆಗಡೆ ಮತ್ತಿತರರು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು