ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿರುವ ಪ್ಯಾಕೆಟ್‍ಗಳನ್ನೇ ಎಸೆದು ಹೋಗಿರುವ ಘಟನೆ ನಡೆದಿದೆ.
ಹಾಲಿನ ಪ್ಯಾಕೆಟ್ ಜತೆಗೆ ಮೂಟೆಯಲ್ಲಿ ಪಿಪಿಇ ಕಿಟ್‍ಗಳು ಕೂಡ ಪತ್ತೆಯಾಗಿವೆ. ಆನೇಕಲ್ ತಾಲೂಕಿನ ಹುಸ್ಕೂರು ಆರ್‌ಟಿಒ ಕಚೇರಿ ಮುಂದೆ ಹಾಲಿರುವ ಪಾಕೆಟ್‍ಗಳು ಪತ್ತೆಯಾಗಿವೆ. ನಂದಿನಿ, ಅಕ್ಷಯಕಲ್ಪ ಕಂಪನಿಯ ಹಾಲಿನ ಪ್ಯಾಕೆಟ್‍ಗಳು ಇವಾಗಿವೆ. ರಸ್ತೆಯ ಪಕ್ಕದಲ್ಲಿ ಬಿದ್ದಿರುವುದರಿಂದ ವಾಸನೆ ಬರುತ್ತಿದೆ. ಇದರಿಂದ ಜನರು ಈ ರಸ್ತೆಯಲ್ಲಿ ಓಡಾಡುವಾಗ ಬಾಯಿ ಮೂಗು ಮುಚ್ಚಿಕೊಳಳೂವ ಸ್ಥಿತಿ ನಿರ್ಮಾಣವಾಗಿದೆ.
ಹಾಲಿನ ಪ್ಯಾಕೆಟ್‍ಗಳ ಮೇಲೆ ಅಕ್ಟೋಬರ್ 9ನೇ ತಾರಿಖು ಇದೆ. ಆದರೆ ಇಷ್ಟೊಂದು ಹಾಲಿನ ಪ್ಯಾಕೆಟ್‍ಗಳು ಎಲ್ಲಿಂದ ಬಂದವು ಎನ್ನುವುದೇ ನಿಗೂಢವಾಗಿದೆ. ಜತೆಗೆ ಕಳೆದ ಎರಡು ದಿನದಿಂದ ರಸ್ತೆಯ ಪಕ್ಕದಲ್ಲೇ ಹಾಲಿನ ಪ್ಯಾಕೆಟ್‍ಗಳು ಬಿದ್ದಿವೆ. ಆದರೂ ಬಿಬಿಎಂಪಿ ಸಿಬ್ಬಂದಿ ಮಾತ್ರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಪಿಪಿಇ ಕಿಟ್ ಜತೆಗೆ ಹಾಲಿನ ಪ್ಯಾಕೆಟ್‍ಗಳು ಎಲ್ಲಿಂದ ಬಂದವು. ನೂರಾರು ಲೀಟರ್ ಹಾಲನ್ನು ಈ ರೀತಿ ಬೀಸಾಡಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ.