Please assign a menu to the primary menu location under menu

NEWSದೇಶ-ವಿದೇಶಸಿನಿಪಥ

ಬೋಲ್ಡ್ ದೃಶ್ಯಗಳಿಂದ ಒಂದು ರೀತಿ ಟಾರ್ಗೆಟ್ ಆಗಿದ್ದೆ: ಬಾಲಿವುಡ್‍ ನಟಿ ಮಲ್ಲಿಕಾ ಶೆರಾವತ್ ಮನದಾಳ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ನಾನು ಹಲವು ಬಾರಿ ಬೋಲ್ಡ್ ದೃಶ್ಯಗಳಲ್ಲಿ ಅಭಿನಯಿಸಿದ್ದರಿಂದ ಒಂದು ರೀತಿ ಟಾರ್ಗೆಟ್ ಆಗಿದ್ದೆ ಮತ್ತು ಈ ವೇಳೆ ಸಮಾಜ ಕೂಡ ಹೇಗೆ ಬದಲಾಯಿತು ಎಂಬುದನ್ನು ಬಾಲಿವುಡ್‍ ನಟಿ ಮಲ್ಲಿಕಾ ಶೆರಾವತ್ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್‍ಗೆ ಎಂಟ್ರಿ ಕೊಟ್ಟ ತಕ್ಷಣ ಬೋಲ್ಡ್ ದೃಶ್ಯಗಳಲ್ಲಿ ಅಭಿನಯಿಸಲು ಆರಂಭಿಸಿದೆ ಎಂದು ಅನೇಕ ಮಂದಿ ಟೀಕಿಸಲು ಪ್ರಾರಂಭಿಸಿದರು. ಅಲ್ಲದೇ ಆ ಸಮಯದಲ್ಲಿ ನನ್ನ ಸಹ ನಟರೂ ಕೂಡ ನನ್ನಿಂದ ದೂರ ಆದಾಗ ಸಾಕಷ್ಟು ಕ್ರೂರವಾದ ಪರೀಕ್ಷೆಗಳನ್ನು ಎದುರಿಸಬೇಕಾಯಿತು ಎಂದು ತಮ್ಮ ಅಂದಿನ ಮಾನಸಿಕ ಯಾತನೆಯನ್ನು ಬಹಿರಂಗ ಪಡಿಸಿದ್ದಾರೆ.

2004ರಲ್ಲಿ ಮಲ್ಲಿಕಾ ಶೆರಾವತ್ ಅಭಿನಯಿಸಿದ್ದ ಮರ್ಡರ್ ಸಿನಿಮಾದ ಬಗ್ಗೆ ಮಾತನಾಡಿದ ಅವರು, ಬೋಲ್ಡ್ ದೃಶ್ಯಗಳಲ್ಲಿ ಅಭಿನಯಿಸುವ ಮಹಿಳೆ ಹಾಗೂ ಪುರುಷರನ್ನು ಸಮಾಜ ಯಾವ ದೃಷ್ಟಿಯಲ್ಲಿ ನೋಡುತ್ತದೆ ಹಾಗೂ ಪುರುಷರು ಎಲ್ಲದರಿಂದ ದೂರ ಆದರು ಮಹಿಳೆಯರು ಮಾತ್ರ ಟಾರ್ಗೆಟ್ ಆಗಿರುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್‍ನಲ್ಲಿ ಮಹಿಳೆಯರನ್ನೇ ಯಾಕೆ ಗುರಿಯಾಗಿಸಿಕೊಳ್ಳುತ್ತಾರೆ. ಪುರುಷರನ್ನು ಮಾತ್ರ ಯಾಕೆ ಗುರಿ ಮಾಡುವುದಿಲ್ಲ. ಇದು ಕೇವಲ ಭಾರತ ಮಾತ್ರವಲ್ಲ ಇಡೀ ಪ್ರಪಂಚದಾದ್ಯಂತ ಇದೆ. ಪುರುಷರು ಎಲ್ಲದರಿಂದ ದೂರ ಆಗಬಹುದು ಆದರೆ ಮಹಿಳೆಯರನ್ನು ಮಾತ್ರ ಯಾಕೆ ಎಲ್ಲರೂ ದೂಷಿಸುತ್ತಾರೆ ಎಂದು ನನಗೆ ಗೊತ್ತಿಲ್ಲ.

ಅದರಲ್ಲಿಯೂ ಭಾರತದಲ್ಲಿಯೇ ಇದು ಹೆಚ್ಚು ಎಂದು ನಾನು ಭಾವಿಸುತ್ತೇನೆ. ನಮ್ಮ ಸಮಾಜವು ವಿಕಸನಗೊಂಡಿಲ್ಲ ಎಂದು ನಾನು ಅಂದುಕೊಳ್ಳುತ್ತೇನೆ. ಇಲ್ಲಿನ ಜನರು ವಿಭಿನ್ನವಾಗಿ ಯೋಚಿಸುತ್ತಾರೆ. ಅಲ್ಲದೇ ಈ ಹಿಂದೆ ಮಾಧ್ಯಮಗಳು ಸಹ ಇಂತಹ ದೃಶ್ಯಗಳಿಗೆ ಬೆಂಬಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನನಗೆ ಕೆಲವು ವಿಷಯಗಳು ಕಷ್ಟವಾಗಿದ್ದರೂ, ನನ್ನ ವೃತ್ತಿ ಜೀವನದ ಆರಂಭದಲ್ಲಿ ಚಲನಚಿತ್ರಗಳ ಆಯ್ಕೆ ಮಾಡುವಾಗ ಒಂದು ರೀತಿ ಪೊಲೀಸ್ ಆಗಿದ್ದೆ. ಆದರೀಗ ಸಮಾಜ ಬದಲಾಗಿದೆ ಎಂದು ನಾನು ಅಂದುಕೊಂಡಿದ್ದೇನೆ.

ಅಲ್ಲದೇ ಮಾಧ್ಯಮಗಳು ಕೂಡ ಈಗ ಹೆಚ್ಚಾಗಿ ಮಹಿಳೆಯರಿಗೆ ಬೆಂಬಲ ನೀಡುತ್ತವೆ. ಜೊತೆಗೆ ನಟಿಯರು ಈಗ ನಗ್ನ ದೃಶ್ಯಗಳಲ್ಲಿ ಅಭಿನಯಿಸಲು ಒಪ್ಪಿಕೊಳ್ಳುತ್ತಿದ್ದಾರೆ. ಇದನ್ನು ಬಹಳ ಕಲಾತ್ಮಕವಾಗಿ ಪರಿಗಣಿಸಲಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...