NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ಕಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳಾದರೆ ರಾಜೀನಾಮೆ ಕೊಡುತ್ತೇನೆ: ವಿಪಕ್ಷ ನಾಯಕ ಸಿದ್ದು ಸವಾಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಸಂಬಂಧ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಎಸ್‌ವೈ ಕುಟುಂಬ ಭಾಗಿಯಾಗಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಿ ಆಗ ಸತ್ಯ ಹೊರಬರಲಿದೆ ಎಂದು ಹೇಳಿದರು.

ಇನ್ನು ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಈ ಕ್ಷೇತ್ರಗಳಿಗೆ ಪಕ್ಷದ ಪರವಾಗಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎರಡೂ ಕಡೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದರು.

ಬಿಜೆಪಿ ಸರ್ಕಾರೇತರ ರಾಜ್ಯಗಳಲ್ಲಿ ಕೊಲೆ, ಅತ್ಯಾಚಾರಗಳಾದಾಗ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸಿ ಅದನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ತಿದ್ರು. ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯಾಗಿದೆ. ಬಿಜೆಪಿಯವರೇನಾದ್ರೂ ಅಲ್ಲಿನ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ್ರಾ ಎಂದು ಪ್ರಶ್ನಿಸಿದ್ದಾರೆ.

ಎಪಿಎಂಸಿ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳು ಮೇಲ್ಮನೆಯಲ್ಲಿ ಚರ್ಚೆಗೆ ಬರಲೇ ಇಲ್ಲ, ಇನ್ನು ಕಾರ್ಮಿಕ ಕಾಯ್ದೆ ಪರ ಬಹುಮತವೇ ಇಲ್ಲ. ಹೀಗಾಗಿ ಈ ಕಾಯ್ದೆಗಳ ಜಾರಿಗೆ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸಬೇಕು. ಈಗಿನ್ನೂ ಹೋರಾಟದ ಕಿಚ್ಚು ಆರಂಭವಾಗಿದೆ, ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಈಗಿರುವ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ತಾಲೂಕು ಕೇಂದ್ರಗಳಿಗೆ ಸೀಮಿತವಾಗಿರುವ ಎಪಿಎಂಸಿ ಮಾರುಕಟ್ಟೆಯನ್ನು ಪ್ರತೀ ಗ್ರಾಮ ಪಂಚಾಯಿತಿಗೂ ವಿಸ್ತರಿಸುವುದಾಗಿ ಹೇಳಿತ್ತು. ಬಿಜೆಪಿಯವರು ನಮ್ಮ ಪ್ರಣಾಳಿಕೆಯ ಆಯ್ದ ಭಾಗವನ್ನು ಮಾತ್ರ ಜನರಿಗೆ ತೋರಿಸಿ, ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ನಿತ್ಯ ದಾಖಲಾಗುತ್ತಿರುವ ಒಟ್ಟು ಕೊರೊನಾ ಸೋಂಕಿತರ ಪ್ರಮಾಣದಲ್ಲಿ 15% ಕರ್ನಾಟಕವೊಂದರಲ್ಲೇ ದಾಖಲಾಗುತ್ತಿದೆ. ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸಲಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸುವ ಬದಲು ರಾಜೀನಾಮೆ ನೀಡಿ ಮನೆಗೆ ಹೋಗಲಿ. ಇಂಥವರು ಇದ್ದು ಮಾಡುವುದಾದರೂ ಏನು ಎಂದು ಕಿಡಿಕಾರಿದರು.

1 Comment

  • ಆಯಿತು ಪ್ರೂವ್ ಮಾಡಿ ಅಂತ bsy ತಿಳಿಸಿದ್ದಾರಲ್ಲ ತಮಗೆ

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ