Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಬಿಜೆಪಿ ಜತೆ ಚೆನ್ನಾಗಿದ್ದಿದ್ದರೆ ಈಗ ನಾನೇ ಸಿಎಂ ಆಗಿರುತ್ತಿದ್ದೆ: ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಾಂಗ್ರೆಸ್‌ ಸಹವಾಸದಿಂದ ನಮ್ಮ ಶಕ್ತಿಯೂ ಕುಂದಿದೆ. ಒಂದು ವೇಳೆ ಬಿಜೆಪಿ ಜತೆ ಚೆನ್ನಾಗಿದ್ದಿದ್ದರೆ ಈಗ ನಾನೇ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸಿಎಂ ಆಗಿದ್ದಾಗ 19 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ನೀಡಿದ್ದೆ, ಇದೇ ಸಿದ್ದರಾಮಯ್ಯ ಕುಮಾರಸ್ವಾಮಿ ಸಿಎಂ ಆದರೆ ನಮಗೆ ಲಾಭ, ಯಡಿಯೂರಪ್ಪ ಸಿಎಂ ಆದರೆ ಇನ್ನಾರು ತಿಂಗಳಲ್ಲಿ ಕುರ್ಚಿ ಬಿಟ್ಟುಹೋಗುತ್ತಾರೆ. ಆ ನಂತರ ನಾನೆ ಸಿಎಂ ಆಗಬಹುದು ಎಂದು ಕನಸ್ಸು ಕಾಣುತ್ತಿದ್ದರು ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ದೇವೇಗೌಡರ ಮಾತು ಕೇಳಿ ಕಾಂಗ್ರೆಸ್‌ ಜತೆ ಕೈ ಜೋಡಿಸಿದೆ. ಈ ಕೈ ಜೋಡಿಸಿದ ಕಾರಣ ನಮ್ಮ ಶಕ್ತಿ ಕುಂದಿತು. ಸಿದ್ದರಾಮಯ್ಯ ಅಪಪ್ರಚಾರ ಮಾಡಿದರು. ನಾನು ಹಿಂದೆ ಸಿಎಂ ಆಗಿದ್ದಾಗ ಬಂದ ಒಳ್ಳೆ ಹೆಸರು, ಸಿದ್ದರಾಮಯ್ಯ ಮತ್ತು ಅವರ ತಂಡದಿಂದ ಹಾಳಾಗಿದೆ. ಪೂರ್ವಯೋಜನೆ ಮಾಡಿ ನನ್ನ ಹೆಸರು ಹಾಳು ಮಾಡಿದರು. ಕಾಂಗ್ರೆಸ್‌ನಿಂದಲೇ ಎಲ್ಲವೂ ಸರ್ವನಾಶವಾಯಿತು ಎಂದು ಕಿಡಿಕಾರಿದರು.

ನಾವು ಭಾವನಾತ್ಮಕ ಟ್ರ್ಯಾಪ್‌ಗೆ ಬಲಿಯಾದೆವು. ರಾಜಕೀಯದಲ್ಲಿ ಅನಾಥರಾದಗ ಮರುಜೀವ ಕೊಟ್ಟವರ ಬಗ್ಗೆ ಮಾತನಾಡುತ್ತಾರೆ. ದೇವೇಗೌಡರ ಫೋಟೋ ಇಟ್ಟುಕೊಳ್ಳುತ್ತೇನೆ ಅಂತಾರೆ. ಆದರೆ, ನನ್ನನ್ನು ಟೀಕೆ ಮಾಡುತ್ತಾರೆ. ನಾನು ಏನು ತಪ್ಪು ಮಾಡಿದ್ದೇನೆ? ನಾವು ಯಾರನ್ನು ಬೆಳೆಸಿದ್ದೇವೆಯೋ ಅವರೇ ನಮ್ಮ ಬಗ್ಗೆ ಮಾತನಾಡುತ್ತಾರೆ. ಇದನ್ನು ನೋಡಿದರೆ ನಮ್ಮ ಕುಟುಂಬಕ್ಕೆ ಶಾಪ ಇದೆ. ಈ ಶಾಪ ವಿಮೋಚನೆ ಹೇಗೆ ಅಂತಾ ಕಂಡುಹಿಡಿಯಬೇಕು ಎಂದು ಹೇಳಿದರು.

ಇನ್ನು ಸರ್ಕಾರ ಬಂದು 15 ತಿಂಗಳಾಗಿದ್ದು, ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ನೆರೆ ಹಾವಳಿ, ಕೊರೊನಾ ಸಮಸ್ಯೆಯಾಗಿದೆ. ಗ್ರಾಪಂ ಚುನಾವಣೆ ಹಿನ್ನೆಲೆ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನಡೆಯುತ್ತಿದ್ದು, ಮೂರರಿಂದ ನಾಲ್ಕು ಮಂತ್ರಿಗಳಿಂದ ಚುನಾವಣಾ ತಯಾರಿಯಾಗುತ್ತಿದೆ. ಆದರೆ, ಜನರ ಸಮಸ್ಯೆಗೆ ಮಂತ್ರಿಗಳು ಸ್ಪಂದಿಸುತ್ತಿಲ್ಲ. ಯಾವ ಇಲಾಖೆಗೆ ಯಾವ ಮಂತ್ರಿಗಳಿದ್ದಾರೆ ನಮಗೇ ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ಇಲ್ಲ. ಅದು ಪಕ್ಷದ ಸರ್ಕಾರ ಅಲ್ಲ ರಾಜ್ಯದ ಸರ್ಕಾರ. ಒಳ್ಳೇ ಕೆಲಸಕ್ಕೆ ಸದಾ ಸಹಕಾರ ನೀಡುತ್ತೇನೆ. ಆದರೆ, ಈಗ ಸಾಗುತ್ತಿರುವ ದಾರಿ ಸರಿಯಲ್ಲ. ಕೊರೊನಾ ಸಂದರ್ಭದಲ್ಲಿ ಇಷ್ಟು ದೊಡ್ಡ ಪ್ರಮಾಣದ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಬೇಕಾಗಿರಲಿಲ್ಲ ಎಂದು ವಿರೋಧಿಸಿದರಲ್ಲದೇ, ಕೇಂದ್ರ ಸರ್ಕಾರ ನಿಮ್ಮನ್ನು ಲೆಕ್ಕಕ್ಕೆ ಇಟ್ಟಿಲ್ಲ. ಬಿಜೆಪಿ ಸಿಎಂ ಇದ್ದಾರೆ ಅನ್ನೋದನ್ನು ಕೇಂದ್ರ ಮರೆತುಬಿಟ್ಟಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ವ್ಯಂಗ್ಯವಾಡಿದರು.

ಇನ್ನು ದೇಶದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ಬಗ್ಗೆ ಸಭೆಯಾಗುತ್ತಿದೆ. ಈ ನಡುವೆ ಕಾಂಗ್ರೆಸ್ ದೇಶದಲ್ಲಿ ಅಪ್ರಸ್ತುತವಾಗುತ್ತದೆ. ಇದಕ್ಕೆ ವೇದಿಕೆ ಅವರೇ ಸಿದ್ಧ ಮಾಡಿಕೊಂಡಿದ್ದಾರೆ. ಬಿಜೆಪಿ ವಿರುದ್ಧವಾಗಿ ಪ್ರಾದೇಶಿಕ ಪಕ್ಷಗಳು ನಿಲ್ಲುತ್ತವೆ ಎಂಬ ವಿಶ್ವಾಸ ಇದೆ. ಈ ಬಗ್ಗೆ ಕೆಸಿಆರ್ ನನಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದರು.

ರಾಜ್ಯದ ಚಿತ್ರಣವನ್ನು ಬದಲಾಯಿಸುವ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ ಅವರೇ ಜನರ ತುಟಿಗೆ ತುಪ್ಪ ಸವರುವ ಕೆಲಸ ಮಾಡಬೇಡಿ. ಸಮಾಜದ ಮೂಗಿಗೆ ತುಪ್ಪ ಸವರಿ ಶಾಶ್ವತವಾಗಿ ಹಿಡಿದಿಡಲು ಸಾಧ್ಯವಿಲ್ಲ. ಸತ್ಯಾಂಶ ಹೊರಗೆ ಬಂದೇ ಬರುತ್ತದೆ. ಸಂಕುಚಿತ ಕೀಳುಮಟ್ಟದ ರಾಜಕೀಯವನ್ನು ಬಿಡಿ. ಇನ್ನು ಮುಂದೆಯಾದರೂ ಜನರಿಗಾಗಿ ಕೆಲಸ ಮಾಡಿ ಎಂದು ಹರಿಹಾಯ್ದರು.

ಬೆಳಗಾವಿಯಲ್ಲಿ ಸಾಕಷ್ಟು ಹಾನಿಯಾಗಿದೆ. ಕಳೆದ ಬಾರಿ ನೀಡಿದ ಭರವಸೆ ಈಡೇರಿಸಿಲ್ಲ. ಯಾರು ಸೌಜನ್ಯಕ್ಕಾದರೂ ಹಳ್ಳಿಗಳಿಗೆ ಭೇಟಿ ಮಾಡುತ್ತಿಲ್ಲ. ಸರ್ಕಾರ ಸಲಹೆ, ಟೀಕೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ದ್ರೋಹ ಬಗೆಯುವ ಕೆಲಸ ಮಾಡಬೇಡಿ. ಉಪಚುನಾವಣೆ ಗೆಲುವಿನಿಂದ ಬೀಗಬೇಡಿ. ಇದು ಯಾವುದು ಯಾರಿಗೂ ಶಾಶ್ವತವಲ್ಲ ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ