ಕೋಲಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 1981 ಜನವಸತಿ ಗ್ರಾಮಗಳಿಗೆ ಅಗತ್ಯ ಕುಡಿಯುವ ನೀರನ್ನು 2024 ರೊಳಗೆ ಪೂರೈಸಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2020-21 ನೇ ಸಾಲಿನ ‘ಜಲ್ ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮೊದಲ ಹಂತದಲ್ಲಿ ಜಿಲ್ಲೆಯಲ್ಲಿ 90 ಜನವಸತಿ ಹಳ್ಳಿಗಳಿಗೆ ನೀರು ಪೂರೈಸುವ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಈ ಹಳ್ಳಿಗಳಲ್ಲಿ ನೀರು ದೊರೆಯುವ ನೀರಿನ ಮೂಲಗಳನ್ನು ಗುರುತಿಸಿಕೊಳ್ಳಿ. ಈ ಮೂಲಗಳು ಬತ್ತಿದರೆ ಪೂರಕ ನೀರಿನ ಮೂಲಗಳನ್ನು ಗುರುತಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಇರುವ 1099 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆನ್ ಲೈನ್ ವ್ಯಾಪ್ತಿಗೆ ಒಳಪಡಿಸಲಾಗುತ್ತಿದ್ದು ಆ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಲಾಗಿನ್ ಮಾಡಲಾಗುವುದು. ಇದರಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋದಾಗ ಪಂಚಾಯಿತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ಹೋಗುತ್ತದೆ. ಅವರು ಸಹಾಯಕ ಕಾರ್ಯಪಾಲಕ ಅಭಿಯಂತರಿಗೆ ಮಾಹಿತಿ ರವಾನಿಸಿ ರಿಪೇರಿ ಮಾಡಿಸಲು ಅನುಕೂಲವಾಗುತ್ತದೆ ಅಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಘಟಕಗಳು ಕಾರ್ಯ ನಿರ್ವಹಿಸದ ಘಟಕಗಳ ಬಗ್ಗೆ ಮಾಹಿತಿ ದೊರೆಯುತ್ತದೆ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ ಅವರು ಮಾತನಾಡಿ, ಈಗಾಗಲೇ ಕುಡಿಯುವ ನೀರಿನ ಪೂರೈಕೆಗೆ 250 ಲಕ್ಷ ರೂಗಳ ಕ್ರಿಯಾ ಯೋಜನೆಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ. ಜಿಲ್ಲೆಯಲ್ಲಿ 1981 ಜನವಸತಿ ಗ್ರಾಮಗಳಿದ್ದು ಜಲ್ ಜೀವನ್ ಮಿಷನ್ ಯೋಜನೆಗೆ 90 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಲ್ಲಿ ಸ್ಥಳೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯಿಂದ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಮೋದಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಮಿತಿಯ ಸದಸ್ಯ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail