NEWSದೇಶ-ವಿದೇಶಸಂಸ್ಕೃತಿ

ರಾಜ್ಯದ ಹಿರಿಯ ನಾಗರಿಕರಿಗೆ ಉಚಿತವಾಗಿ ಅಯೋಧ್ಯ ತೀರ್ಥಯಾತ್ರೆ : ಸಿಎಂ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಹಿರಿಯ ನಾಗರಿಕರಿಗೆ ಉಚಿತವಾಗಿ ಅಯೋಧ್ಯ ತೀರ್ಥಯಾತ್ರೆ ಸೌಲಭ್ಯ ಒದಗಿಸಲು ದೆಹಲಿ ಸರ್ಕಾರ ಮುಂದಾಗಿದೆ.

ಈ ಕುರಿತು ಬುಧವಾರ ವಿಧಾನಸಭೆಗೆ ತಿಳಿಸಿದರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸರ್ಕಾರ ನಾಗರಿಕರನ್ನು ಅತ್ಯಂತ ಗೌರವದಿಂದ ಕಾಣುತ್ತದೆ ಹಾಗೂ ರಾಮರಾಜ್ಯ ನಮ್ಮ ಕನಸಾಗಿದೆ. ಈ ದಿಸೆಯಲ್ಲಿ ದೆಹಲಿಯ ಹಿರಿಯ ನಾಗರಿಕರು ಅಯೋಧ್ಯ ತೀರ್ಥಯಾತ್ರೆಯನ್ನು ಕೈಗೊಳ್ಳಲು ನೆರವು ನೀಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ನನಗೆ ಭಗವಾನ್ ರಾಮಾಂಜನೇಯನಲ್ಲಿ ನಂಬಿಕೆ ಇದೆ. ರಾಮರಾಜ್ಯದಲ್ಲಿ ನಂಬಿಕೆ ಇದೆ. ಅದನ್ನು ಸಾಧಿಸುವುದೇ ನಮ್ಮ ಗುರಿಯಾಗಿದೆ. ರಾಮರಾಜ್ಯ ಸಾಧಿಸಬೇಕಾದರೆ 10 ಗುರಿಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಯಾರು ಹಸಿವಿನಿಂದ ಬಳಲಬಾರದು, ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ, ಎಲ್ಲರಿಗೂ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ, ಸ್ವಚ್ಛ ನೀರು, ಕರೆಂಟ್, ಮನೆ, ಹಿರಿಯರಿಗೆ ಗೌರವ, ಮಹಿಳಾ ಸುರಕ್ಷತೆ, ಸಮಾನತೆ, ಅಪರಾಧ ಮುಕ್ತ ಸಮಾಜ ಮತ್ತು ರಾಮರಾಜ್ಯದ ಮಹತ್ವದ ತತ್ವಗಳನ್ನು ಸಾಧಿಸುವುದೇ ನಮ್ಮ 10 ಗುರಿಗಳಾಗಿವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ