NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಸರ್ಕಾರದ ಜಾತಕಪತ್ರ ಪರಿಶೀಲಿಸಿ ನೀವೇ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ: ಪ್ರಧಾನಿ ಮೋದಿಜೀಗೆ ಸಿದ್ದರಾಮಯ್ಯ ಟಕ್ಕರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗಗೊಳಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳ @BSYBJP ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ರಾಜ್ಯ @BJP4Karnataka ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು ಎಂದಿದ್ದಾರೆ.

ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ಧಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು @BJP4Karnataka ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. @BJP4India ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ @narendramodi ಮತ್ತು @BJP4India ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, @BJP4Karnataka ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗಗೊಳಿಸಿದ್ದಾರೆ.

ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ @narendramodi ಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ @BJP4Karnataka ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ.

ಪ್ರಧಾನಮಂತ್ರಿ @narendramodi ಅವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ ಎಂದಿದ್ದಾರೆ.

ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು,ರಾಜ್ಯದ @BJP4Karnataka ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ @BJP4Karnataka ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ