NEWSದೇಶ-ವಿದೇಶಸಂಸ್ಕೃತಿ

ಭಾರತದ 10-12ನೇ ಶತಮಾನದ 157 ಪುರಾತನ ಕಲಾಕೃತಿಗಳು ಯುಎಸ್‍ನಿಂದ ವಾಪಸ್‌: ಪ್ರಧಾನಿ ಮೋದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಹಿಂದೆ ಕಳವಾಗಿದ್ದ ವಿಗ್ರಹಗಳೆಲ್ಲವನ್ನು ಪ್ರಧಾನಿ ನರೇಂದ್ರ ಮೋದಿ ಯುಎಸ್‍ನಿಂದ ಭಾರತಕ್ಕೆ ತಂದಿದ್ದಾರೆ.

ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್‍ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿಯವರೂ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ.

ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ.

ಹೀಗೆ ವಾಪಸ್ ತರಲಾದ 45 ಕಲಾಕೃತಿಗಳು ಸಾಮಾನ್ಯ ಯುಗಕ್ಕಿಂತಲೂ ಮುಂಚಿನವು. 71 ಸಾಂಸ್ಕೃತಿಕ ಕಲಾಕೃತಿಗಳಾಗಿದ್ದು, 60 ಹಿಂದೂ ಧರ್ಮ ಬಿಂಬಕ ಕಲಾಕೃತಿಗಳಾಗಿವೆ. ಇನ್ನು 16 ಕಲಾಕೃತಿಗಳು ಬೌದ್ಧಧರ್ಮಕ್ಕೆ ಸೇರಿದ್ದಾಗಿದ್ದು, 9 ಜೈನಧರ್ಮದ್ದಾಗಿವೆ.

ಮೂರು ತಲೆಯ ಬ್ರಹ್ಮ, ರಥ ಚಾಲನೆ ಮಾಡುತ್ತಿರುವ ಸೂರ್ಯ, ವಿಷ್ಣು, ದಕ್ಷಿಣಾಮೂರ್ತಿಯಾಗಿರುವ ಶಿವ, ನೃತ್ಯ ಮಾಡುತ್ತಿರುವ ಗಣೇಶನ ವಿಗ್ರಹಗಳು, ತಾರ, ಜೈನ ತೀಥರ್ಂಕರ, ಪದ್ಮಾಸನ ತೀಥರ್ಂಕರ ಮತ್ತು ಜೈನ ಚೌಬಿಸಿ ಮೂರ್ತಿಗಳೂ ಇವೆ.

ಇನ್ನು ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀಥರ್ಂಕರ ಮೂರ್ತಿಗಳ ವಿಗ್ರಹ ಇದೆ. ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿಕ ಪ್ರತಿಬಿಂಬಕ ಕಲಾಕೃತಿಗಳಿವೆ.

ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಯುಎಸ್ ಪ್ರವಾಸ ಮುಗಿಸಿ, ಅಲ್ಲಿಂದ ಹೊರಟಿದ್ದಾರೆ. ನಿನ್ನೆ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದರು. ಸೆಪ್ಟೆಂಬರ್ 24ರಂದು ಕ್ವಾಡ್ ಶೃಂಗಸಭೆಯಲ್ಲಿ ಮಾತನಾಡಿದ್ದರು.

ಶನಿವಾರ (ಸೆಪ್ಟೆಂಬರ್ 25) ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ