NEWSದೇಶ-ವಿದೇಶ

21ದಿನ ಕಳೆದರು ಮುಗಿಯದ ಸಾರಿಗೆ ನೌಕರರ ಮುಷ್ಕರ: ಇಂದು (ನ.17) 2,296 ನೌಕರರಿಗೆ ನೋಟಿಸ್ ಜಾರಿ ಮಾಡಿದ MSRTCಯಿಂದ ವಜಾಗೊಳಿಸುವ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬುಧವಾರ 21 ನೇ ದಿನಕ್ಕೆ ಕಾಲಿಟ್ಟ ಮುಷ್ಕರದಲ್ಲಿ ಭಾಗವಹಿಸಿದ್ದಕ್ಕಾಗಿ 2,296 ದಿನಗೂಲಿ ನೌಕರರಿಗೆ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ಬೆಚ್ಚಿದ ಕೆಲ ನೌಕರರು 100 ಕ್ಕೂ ಹೆಚ್ಚು ಬಸ್‌ಗಳ ಕಾರ್ಯಾಚರಣೆ ಮಾಡಿವೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರು 24 ಗಂಟೆಗಳ ಒಳಗೆ ಕರ್ತವ್ಯಕ್ಕೆ ಮರಳ ಬೇಕು ಇಲ್ಲದಿದ್ದರೆ ವಜಾಗೊಳಿಸಲಾಗುವುದು ಎಂದು ನೋಟಿಸ್‌ ನೀಡಲಾಗಿದೆ. ಇದರಿಂದ ಚಾಲನ ಸಿಬ್ಬಂದಿ ಹೊರತುಪಡಿಸಿ 7,400 ಇತರ ನೌಕರರು ಕೆಲಸಕ್ಕೆ ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.

ಎಂಎಸ್‌ಆರ್‌ಟಿಸಿಯನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸುವಂತೆ ಆಗ್ರಹಿಸಿ ನಷ್ಟದಲ್ಲಿರುವ ನಿಗಮದ ನೌಕರರು ಕಳೆದ ಅಕ್ಟೋಬರ್‌ 28ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

ನಿಗಮದ ವಿಲೀನದಿಂದ ನೌಕರರಿಗೆ ಉತ್ತಮ ಸಂಬಳದ ಜೊತೆಗೆ ಸರ್ಕಾರಿ ನೌಕರರ ಸ್ಥಾನಮಾನ ಸಿಗಲಿದೆ. ಹೀಗಾಗಿ ಅಕ್ಟೋಬರ್ 28 ರಂದು ಪ್ರಾರಂಭವಾದ ಮುಷ್ಕರ ನವೆಂಬರ್ 9 ರಿಂದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಿಗಮದ ಎಲ್ಲಾ 250 ಬಸ್ ಡಿಪೋಗಲಿಗೂ ಬಿಗ ಜಡಿದು ಹೋರಾಟ ಮುಂದುವರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಮ್ಮ ನಿಗಮವು 92, 000 ಹೆಚ್ಚು ನೌಕರರನ್ನು ಹೊಂದಿರುವ ದೇಶದ ಅತಿದೊಡ್ಡ ಸಂಸ್ಥೆಗಳಲ್ಲಿ ಒಂದಾಗಿದ್ದು, ಈನಡುವೆ ಮುಷ್ಕರಿಂದಾಗಿ ಸಾರಿಗೆ ನಿಗಮದ ಸೇವೆಗಳು ಅಸ್ತವ್ಯಸ್ತಗೊಂಡಿವೆ. ಹೀಗಾಗಿ 2,584 ದಿನಗೂಲಿ ಕಾರ್ಮಿಕರಲ್ಲಿ 2,296 ಮಂದಿಗೆ ನೋಟಿಸ್ ನೀಡಲಾಗಿದೆ. ಅವರು 24 ಗಂಟೆಗಳ ಒಳಗೆ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ, ಮುಷ್ಕರದಲ್ಲಿ ಭಾಗವಹಿಸಿರುವುದ್ದಕ್ಕೆ ಮತ್ತು ಇತರರನ್ನು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದ್ದಕ್ಕಾಗಿ ನಿಗಮವು 2 ಸಾವಿರ ನೌಕರರನ್ನು ಅಮಾನತುಗೊಳಿಸಿತ್ತು. ಇಂದು 2,584 ದಿನಗೂಲಿ ಕಾರ್ಮಿಕರಲ್ಲಿ 2,296 ಮಂದಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಮುಷ್ಕರದ ನಡುವೆಯೂ ಒಟ್ಟು 92,266 ನೌಕರರಲ್ಲಿ 7,400 ನೌಕರರು ಬುಧವಾರ ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ 7,623 ಸಿಬ್ಬಂದಿ ಪುನಃ ಕರ್ತವ್ಯಕ್ಕೆ ಮರಳಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ ಈ ಸಂಖ್ಯೆ ಮಂಗಳವಾರಕ್ಕಿಂತ ಕಡಿಮೆಯಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ದಿನಗಳಿಂದ, ಕೆಲ ನೌಕರರು ಮುಷ್ಕರದ ನಡುವೆಯೂ ಕೆಲಸಕ್ಕೆ ಮರಳುತ್ತಿದ್ದಾರೆ. ಆದರೂ ಅವರ ಸಂಖ್ಯೆ ಪ್ರತಿದಿನ ಕಡಿಮೆಯಾಗುತ್ತಲೆ ಇದೆ. ಸೋಮವಾರ 6,895 ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರು ಎಂದು MSRTC ವಕ್ತಾರ ತಿಳಿಸಿದ್ದರು. ಅಲ್ಲದೆ ಮುಂಬೈನ ವಿವಿಧ ಡಿಪೋಗಳಿಂದ 100 ಕ್ಕೂ ಹೆಚ್ಚು ಬಸ್‌ಗಳು ಸೇವೆ ಆರಂಭಿಸಿವೆ, ಅವುಗಳಲ್ಲೂ ಮುಖ್ಯವಾಗಿ ಹವಾನಿಯಂತ್ರಿತ ‘ಶಿವಶಾಹಿ’ ಮತ್ತು ‘ಶಿವನೇರಿ’ ಬಸ್‌ಗಳು ಓಡಾಡುತ್ತಿವೆ ಎಂದು ಹೇಳಿದ್ದರು.

ಆದರೆ, ಅಧಿಕಾರಿಗಳು ಮಾತ್ರ ಬಸ್‌ಗಳು ಓಡಾಡುತ್ತಿವೆ ಎಂದು ಹೇಳುತ್ತಿದ್ದಾರೆ. ರಸ್ತೆಗಳಲ್ಲಿ ಮಾತ್ರ ಬಸ್‌ಗಳು ಕಾಣಿಸುತ್ತಿಲ್ಲ. ಇದನ್ನು ಗಮನಿಸಿದರೆ ತಿಳಿಯುತ್ತಿದೆ ಅಧಿಕಾರಿಗಳು ಒಂದು ಕಡೆ ಮುಷ್ಕರವನ್ನು ಹತ್ತಿಕ್ಕುವ ಪ್ರಯತ್ನವಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಮುಷ್ಕರ ನಿರತ ನೌಕರರು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...