NEWSದೇಶ-ವಿದೇಶಸಂಸ್ಕೃತಿ

ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ನಾಡಿನ ಮಹಾನ್‌ ಸಾಧಕರು

ಹರೇಕಳ ಹಾಜಬ್ಬ ಬರಿಗಾಲಲ್ಲಿ ಬಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸೋಮವಾರ (ನ.8) ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 2020ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಈ ಕಾರ್ಯಕ್ರಮದಲ್ಲಿ 7 ಜನರಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ ಹಾಗೂ 102 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಜರಿದ್ದರು.

ಕರ್ನಾಟಕದ ನಾಲ್ವರು ಸಾಧಕರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಅಕ್ಷರ ಸಂತ ಹರೇಕಳ ಹಾಜಬ್ಬು, ಪರಿಸರ ಪ್ರೇಮಿ ತುಳಸಿ ಗೋವಿಂದೇಗೌಡ, ಮಾಜಿ ಹಾಕಿ ಪಟು ಎಂಪಿ ಗಣೇಶ್​​ ಮತ್ತು ಉದ್ಯಮಿ ವಿಜಯ್​ ಸಂಕೇಶ್ವರ್​ ಅವರೂ ಕೂಡ ಪದ್ಮ ಶ್ರೀ ಪಶಸ್ತಿ ಪಡೆದರು.

ಅಕ್ಷರ ಸಂತ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಬರಿಗಾಲಲ್ಲಿ ಬಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಅನಕ್ಷರಸ್ಥರಾಗಿದ್ದರೂ ಕೂಡ ಬೀದಿ ಬದಿಯಲ್ಲಿ ಕಿತ್ತಲೆ ಹಣ್ಣು ವ್ಯಾಪಾರ ಮಾಡುತ್ತ ಸ್ವಂತ ದುಡಿಮೆಯಲ್ಲಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬ ಅವರಿಂದ ನೂರಾರು ಮಕ್ಕಳು ಶಿಕ್ಷಣ ಪಡೆದಿದ್ದು, ಹಾಜಬ್ಬ ಸಾಧನೆಗೆ 2020ರ ಪ್ರತಿಷ್ಠಿತ ಪದ್ಮ ಪುರಸ್ಕಾರ ಸಿಕ್ಕಿದೆ.

ಇಂದು ನಡೆದ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಬರಿಗಾಲಲ್ಲಿ ನಡೆದು ಬಂದ ಹಾಜಬ್ಬರನ್ನು ಕಂಡು ಕ್ಷಣ ಕಾಲ ಅಚ್ಚರಿಗೊಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು.

ಕಿತ್ತಳೆ ಹಣ್ಣು ಮಾರಾಟ ಮಾಡಿ ತನ್ನೂರಿಗೆ ಶಾಲೆ ನಿರ್ಮಿಸಿದ ಅಕ್ಷರಸಂತ ಹರೇಕಳ ಹಾಜಬ್ಬ ಅವರು ಇಂದು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವಿಆರ್ ಎಲ್ ಸಮೂಹ ಸಂಸ್ಥೆಯ ಸ್ಥಾಪಕ ಡಾ. ವಿಜಯ ಸಂಕೇಶ್ವರ್.
ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ನಿಮ್ಹಾನ್ಸ್‌ನ ಮಾಜಿ ನಿರ್ದೇಶಕ ಡಾ. ಬಿ. ಎನ್.‌ ಗಂಗಾಧರ್‌.
ರಾಷ್ಟ್ರಪತಿ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಮೈಸೂರಿನಿಂದ ಪ್ರಕಟವಾಗುವ ದೇಶದ ಏಕೈಕ ಸಂಸ್ಕೃತ ಪತ್ರಿಕೆ ‘ಸುಧರ್ಮ’ ದಿನಪತ್ರಿಕೆಯ ಉಪಸಂಪಾದಕಿ ವಿದುಷಿ ಶ್ರೀಮತಿ ಜಯಲಕ್ಷ್ಮಿ ಕೆ. ಎಸ್. (ಸಂಪಾದಕ ಕೆ. ವಿ. ಸಂಪತ್‌ ಕುಮಾರ್ ಅವರಿಗೆ (ಮರಣೋತ್ತರ) ಪ್ರಶಸ್ತಿ ನೀಡಲಾಗಿದೆ.

ಇದೇ ವೇಳೆ ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ, ಗುಜರಾತ್ ಮಾಜಿ ಸಿಎಂ ಕೇಶು ಭಾಯ್ ಪಟೇಲ್, ಮಾಜಿ ಕೇಂದ್ರ ಸಚಿವರಾದ ದಿ.ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಈಬಾರಿ 10 ಸಾಧಕರಿಗೆ ಪದ್ಮಭೂಷಣ ಹಾಗೂ ಗಾಯಕ ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ, ಉಡುಪಿ ಖ್ಯಾತ ವೈದ್ಯ ಡಾ.ಬೆಳ್ಳೆ ಮೋನಪ್ಪ ಹೆಗ್ಡೆ ಸೇರಿದಂತೆ 7 ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC