NEWSದೇಶ-ವಿದೇಶಸಂಸ್ಕೃತಿ

ಸಾಹಸ ಮೆರೆದ ಮಕ್ಕಳಿಂದ ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲಫೆರ್ ಸಂಸ್ಥೆವತಿಯಿಂದ ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ, ಇತರರ ಪ್ರಾಣ ರಕ್ಷಿಸಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿಗಾಗಿ ನೀಡುವ ಸಲುವಾಗಿ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಘಟನೆ ಎಂದು ಪರಿಗಣಿಸುವಂತಹ ಸಾಹಸಮಯ ಸಾಧನೆ ಮಾಡಿದ ಬಗ್ಗೆ ಎಫ್‍ಐಆರ್ ದಾಖಲಾಗಿರಬೇಕು. ಘಟನೆ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು.

ಇಂತಹ ಸಾಹಸಿ ಮಕ್ಕಳು ನವನಗರದ ಜಿಲ್ಲಾಡಳಿತ ಅರ್ಜಿ ನಮೂನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ರೂ ನಂ.209 ಇವರನ್ನು ಸಂಪರ್ಕಿಸಬಹುದಾಗಿದೆ.

ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಭರ್ತಿ ಅರ್ಜಿಯನ್ನು ರಾಜ್ಯ ಮಕ್ಕಳ ಕಲ್ಯಾಣ ಸಂಸ್ಥೆ, ನಂ.135 ಅಡ್ಡರಸ್ತೆ, ನಂದಿದುರ್ಗ ರಸ್ತೆ, ಜಯಮಹಲ್ ಬಡಾವಣೆ, ಬೆಂಗಳೂರು-560046 ಇವರಿಗೆ ನೇರವಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಬಾಗಲಕೋಟೆ ಮಕ್ಕಳು  ಹೆಚ್ಚಿನ ಮಾಹಿತಿಗಾಗಿ ದೂಸಂ.08354-235708ಗೆ ಸಂಪರ್ಕಿಸಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಕ್ಕಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-23330846, 22925898, ಕೌನ್ಸಿಲ್ ಫಾರ್ ಚೈಲ್ಡ್ ವೆಲ್ ಫೆರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು  ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...