NEWSದೇಶ-ವಿದೇಶನಮ್ಮರಾಜ್ಯ

ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಬಿಜೆಪಿ ಬೆಂಬಲ: ಬೇಡಿಕೆ ಈಡೇರಿಸದಿದ್ದರೆ ಎಂಡಿ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ ) ನೌಕರರು ನಿಗಮವನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸಲು ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಬಿಜೆಪಿ ಬೆಂಬಲಿಸಿದ್ದು, ನೌಕರರ ಬೇಡಿಕೆ ಈಡೇರಿಸದಿದ್ದರೆ  ಎಂಡಿ ಕಚೇರಿಗೆ ಬೀಗ ಜಡಿಯುವ ಮೂಲಕ  ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಕಳೆದ ಅಕ್ಟೋಬರ್‌ 28ರಿಂದಲೂ ನೌಕರರು ಮುಷ್ಕರ ಹೂಡಿದ್ದರೂ ಸರ್ಕಾರ ಅವರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಮುಂದಾಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು ನೌಕರರ ಬೇಡಿಕೆ ನ್ಯಾಯಯುತವಾಗಿದ್ದು ಅವುಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಕೂಡ ಅವರೊಂದಿಗೆ ಪ್ರತಿ ಡಿಪೋಗಳಲ್ಲೂ ಧರಣಿ ಆರಂಭಿಸಬೇಕಾಗುತ್ತದೆ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಬೀಗ ಜಡಿದು ಬೇಡಿಕೆ ಈಡೇರಿಸುವವರೆಗೂ ಹೋರಾಟ ಮಾಡಲಾಗುವುದು ಎಂದು  ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಎಂಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿ ಮತ್ತು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ ಕನಿಷ್ಟ್ ಶ್ರೇಣಿ ಎಸ್‌ಟಿ ಕರ್ಮಾಚಾರಿ ಸಂಘದ ಅಧ್ಯಕ್ಷ ಅಜಯ್ ಕುಮಾರ್ ಗುಜಾರ್ 365 ಪುಟಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದ್ದಾರೆ.

ಯೂನಿಯನ್‌ಗಳ ವಿರುದ್ಧ ಎಂಎಸ್‌ಆರ್‌ಟಿಸಿ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಒಕ್ಕೂಟಗಳ ಪರವಾಗಿ ವಕೀಲರಾದ ಗುಣರತ್ನ ಸದಾವರ್ತೆ ಅವರು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ್ದು, ಸಂಘದ ಪ್ರತಿನಿಧಿಗಳು ಸಮಿತಿಯ ಪ್ರಕ್ರಿಯೆಗಳಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದರು.

ಒಕ್ಕೂಟದ ಪ್ರತಿನಿಧಿ ಲಿಖಿತ ಮನವಿ ಪತ್ರ ಸಲ್ಲಿಸುವ ಮೂಲಕ ಪ್ರಾತಿನಿಧ್ಯ ನೀಡಲಾಗುವುದು ಎಂದು ಸದಾವಾರ್ತೆ ತಿಳಿಸಿದರು. ನಂತರ ಗುಜಾರ್ ಅವರು ಸಮಿತಿಯ ಮುಖ್ಯಸ್ಥರಾದ ಕುಂಟೆ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಮೂಲಗಳ ಪ್ರಕಾರ, ಮನವಿ ಪತ್ರವು MSRTC ಅನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವ ಬೇಡಿಕೆಗಳು ಮತ್ತು ಸಲಹೆಗಳನ್ನು ಒಳಗೊಂಡಿದೆ.

ಇನ್ನು ಮುಷ್ಕರದ ವೇಳೆ ಮೃತಪಟ್ಟಿರುವ ಮತ್ತುಆತ್ಮಹತ್ಯೆ ಮಾಡಿಕೊಂಡಿರುವ ಎಂಎಸ್‌ಆರ್‌ಟಿಸಿ ನೌಕರರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿಬ್ಬಂದಿಗಳ ಒರವಾಗಿ ಮೃತರ ಅಂಕಿ ಅಂಶಗಳ ಸಹಿತ ಸರ್ಕಾರದ ಗಮನಕ್ಕೆ ಗುಜಾರ್ ತಂದಿದ್ದಾರೆ ಎಂದು ಕುಂಟೆ ತಿಳಿಸಿದ್ದಾರೆ.

ಇನ್ನು ಇಂದೂ ಕೂಡ ಮುಷ್ಕರ ಮುಂದುವರಿದ್ದು ಸಾರ್ವಜನಿಕರು ಬಸ್‌ ಸೇವೆ ಇಲ್ಲದೆ ಪರದಾಡುತ್ತಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸರ್ಕಾರ ನೌಕರರ ಬೇಡಿಕೆ ಸ್ಪಂದಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು