NEWSದೇಶ-ವಿದೇಶನಮ್ಮರಾಜ್ಯ

ಕೆಎಸ್‌ಆರ್‌ಟಿಸಿ 1.30 ಲಕ್ಷ ನೌಕರರ ಪರವಾಗಿ ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರದಲ್ಲಿ ಭಾಗಿಯಾಗಿ ಬೆಂಬಲ ನೀಡಿದ ಬಿಎಂಟಿಸಿ ಚಾಲಕ

ಹೂ ಗುಚ್ಛ ನೀಡಿ ಬಿಎಂಟಿಸಿ ಚಾಲಕನ ಬರಮಾಡಿಕೊಂಡ ಮುಷ್ಕರ ನಿರತ ಎಂಎಸ್‌ಆರ್‌ಟಿಸಿ ನೌಕರರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ರಾಜ್ಯದ ಸಾರಿಗೆ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಅಕ್ಟೋಬರ್‌ 28 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಬೆಂಬಲ ಸೂಚಿಸಿದ್ದಾರೆ.

ಬುಧವಾರ ನಗರದಲ್ಲಿ ಎಂಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಿದ್ದ ಬಿಎಂಟಿಸಿಯ ಚಾಲಕ ಮಾತನಾಡಿ, ನಾವು ಕೂಡ 6ನೇ ವೇತನ ಆಯೋಗ ಜಾರಿ ಮಾಡುವಂತೆ ಒತ್ತಾಯಿಸಿ ಕಳೆದ ಏಪ್ರಿಲ್‌ 7ರಿಂದ 14ದಿನಗಳ ವರೆಗೆ ಮುಷ್ಕರ ಮಾಡಿದೆವು. ಆದರೆ ಒಗ್ಗಟ್ಟಿನ ಕೊರತೆ ಮತ್ತು ಸಂಘಟನೆಗಳ ಒಡೆದಾಳುವ ನೀತಿಯಿಂದ ನಮ್ಮ ಹೋರಾಟ ವಿಫಲಗೊಂಡಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ನಿಮ್ಮ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆಯ ಸರ್ವ ಸಂಘಟನೆಗಳು ಬೆಂಬಲ ನೀಡಿದ್ದು, ಜತೆಗೆ ನೌಕರರು ಒಗ್ಗಟ್ಟಾಗಿರುವುದರಿಂದ ಮುಷ್ಕರ 20ದಿನ ತಲುಪಿದರೂ ಒಂದೇ ಒಂದು ಬಸ್‌ ಕೂಡ ರಸ್ತೆಗಿಳಿಸದೆ ಹೋರಾಡುತ್ತಿರುವುದನ್ನು ನೋಡಿದರೆ ನಮಗೆ ಹೆಮ್ಮೆ ಆಗುತ್ತಿದೆ. ಹೀಗಾಗಿ ನಿಮ್ಮ ಹೋರಾಟಕ್ಕೆ ನಮ್ಮ ರಾಜ್ಯದ 1.30 ಲಕ್ಷ ಸಾರಿಗೆ ನೌಕರರು ಬೆಂಬಲವಾಗಿ ನಿಂತಿದ್ದಾರೆ ಎಂದು ಹೇಳಿದರು.

ಸಾರಿಗೆ ನೌಕರರನ್ನು ಜೀತದಾಳು ಗಳಂತೆ ನಡೆಸಿಕೊಳ್ಳುತ್ತಿರುವ ಸರ್ಕಾರದ ನೀತಿಗಳಿಗೆ ನಮ್ಮ ಸಂಪೂರ್ಣ ವಿರೋಧವಿದೆ. ಈ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ತನ್ನ ಸಂಪೂರ್ಣ ಬೆಂಬಲವನ್ನು ನೀಡಲಿದ್ದಾರೆ ಎಂದು ತಿಳಿಸಿದರು.

ಇನ್ನು ನಿಮ್ಮ ಹೋರಾಟದ ಕಿಚ್ಚು ನೋಡಿದರೆ ನಮಗೆ ಆನೆ ಬಲ ಬಂದಂತಾಗುತ್ತಿದೆ. ನಿಮ್ಮಿಂದಲಾದರೂ ನಮ್ಮ ರಾಜ್ಯದ ನೌಕರರ ಪರ ಸಂಘಟನೆಗಳು ಎಚ್ಚೆತ್ತುಕೊಂಡು ನಮ್ಮ ಸಮಸ್ಯೆಗೆ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದ ಚಾಲಕ, ನಿಮ್ಮ ನೌಕರರ ಒಗ್ಗಟ್ಟನ್ನು ಕಂಡು ನನಗೆ ವೈಯಕ್ತಿಕವಾಗಿ ತುಂಬ ಸಂತೋಷವಾಗುತ್ತಿದೆ. ಈ ಮೂಲಕ ನಿಮ್ಮ ಬೇಡಿಕೆ ಈಡೇರಲಿ ಎಂದು ನಾನು ನಮ್ಮ 1.30 ಲಕ್ಷ ನೌಕರರ ಪರವಾಗಿ ಆ ದೇವರಲ್ಲೂ ಬೇಡಿಕೊಳ್ಳುತ್ತೇನೆ ಎಂದು ಹೇಳಿದರು.

ಇನ್ನು ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ ಹೋದ ಬಿಎಂಟಿಸಿ ಚಾಲಕನನ್ನು ಮುಷ್ಕರ ನಿರತ ನೌಕರರು ಹೂ ಗುಚ್ಛ ನೀಡುವ ಮೂಲಕ ಬರಮಾಡಿಕೊಂಡು, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಅಭಿನಂದನೆ ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...