ನ್ಯೂಡೆಲ್ಲಿ: ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರ ಣ ರೇಖೆಯ (ಎಲ್ಎಸಿ) ಬಳಿ ಉಂಟಾಗಿರುವ ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಭಾರತ– ಚೀನಾ ಮಿಲಿಟರಿ ಮಾತುಕತೆ ವಿಫಲವಾದ ಬೆನ್ನಲ್ಲೇ ಉಳಿದ ಎಲ್ಲ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಚೀನಾ ಕೆಲಸ ಮಾಡುವ ನಿರೀಕ್ಷೆ ಇದೆ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.
13ನೇ ಸುತ್ತಿನ ಮಿಲಿಟರಿ ಮಾತುಕತೆಯ ಸಂದರ್ಭದಲ್ಲಿ ಗಡಿ ವಿವಾದ ಬಗೆಹರಿಸಿಕೊಳ್ಳಲು ಭಾರತ ರಚನಾತ್ಮಕ ಸಲಹೆಗಳನ್ನು ಮುಂದಿಟ್ಟಿತ್ತು.
ಆದರೆ, ಚೀನಾ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ದ್ವಿಪಕ್ಷೀ ಯ ಒಪ್ಪಂದಗಳು ಮತ್ತು ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಅನುಸರಿಸುವ ಮೂಲಕ ಚೀನಾವು ಪೂರ್ವ ಲಡಾಖ್‌ನಲ್ಲಿ ಉದ್ಭವಿಸಿರುವ ಬಿಕ್ಕಟ್ಟುಗಳನ್ನು ಶೀಘ್ರ ಪರಿಹರಿಸಲಿದೆ ಎಂದು ನಾವು ನಿರೀಕ್ಷಿ ಸುತ್ತೇವೆ ಎಂದು ಬಾಗ್ಚಿ ಹೇಳಿದ್ದಾರೆ.
ಗಾಲ್ವಾನ್ ಕಣಿವೆಯಲ್ಲಿ ಉಂಟಾಗಿದ್ದ ಸಂಘರ್ಷದ ನಂತರ ಭಾರತ –ಚೀನಾ ಉಭಯ ರಾಷ್ಟ್ರಗಳ ನಡುವೆ ಅ.9ರಂದು 13ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆದಿತ್ತು.
ಪೂರ್ವ ಲಡಾಖ್‌ನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಚೀನಾದ ಬದಿಯ ಚುಶುಲ್-ಮೊಲ್ಡೊ ಗಡಿಯಲ್ಲಿ ಈ ಮಾತುಕತೆ ನಡೆದಿತ್ತು. ಸುಮಾರು ಎಂಟೂವರೆ ಗಂಟೆಗಳು ನಡೆದ ಸಭೆ ಅಂತಿಮವಾಗಿ ವಿಫಲವಾಗಿದೆ.