NEWSದೇಶ-ವಿದೇಶರಾಜಕೀಯ

ಬ್ರಿಟಿಷರ ಬಳಿಕ ಭಾರತದ ನ್ಯಾಯಾಂಗಕ್ಕೆ ಉತ್ತಮ ಮೂಲಸೌಕರ್ಯ ನೀಡದೆ ಕಡಗಣನೆ : ಸಿಜೆಐ ರಮಣ ವಿಷಾದ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

 

ನ್ಯೂಡೆಲ್ಲಿ: ಬ್ರಿಟಿಷರು ಬಾರತ ಬಿಟ್ಟು ಹೋದ ಮೇಲೆ ನಮ್ಮ ನ್ಯಾಯಾಂಗ ವ್ಯವಸ್ಥೆಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರಯಾಗರಾಜ್‌ನಲ್ಲಿ ಶನಿವಾರ ಅಲಹಾಬಾದ್ ಹೈಕೋರ್ಟ್‌ನ ಹೊಸ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿಗಳು, ಭಾರತದ ನ್ಯಾಯಾಂಗ ವ್ಯವಸ್ಥೆ ಇಂದಿಗೂ ಯಾವುದೇ ಯೋಗ್ಯ ಅನುಕೂಲವಿಲ್ಲದೆ ‘ಶಿಥಿಲಾವಸ್ಥೆ’ಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬ್ರಿಟಿಷರು ಹೋದ ನಂತರ ನ್ಯಾಯಾಂಗ ವ್ಯವಸ್ಥೆಯನ್ನುಉತ್ತಮ ಮೂಲ ಸೌಕರ್ಯಗಳಿಂದ ಕಡೆಗಣಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದರು..

‘ಭಾರತದಲ್ಲಿ ಕೋರ್ಟ್‌ಗಳು ಮೂಲಭೂತ ವ್ಯವಸ್ಥೆಗಳಿಲ್ಲದೆ ಇಂದಿಗೂ ಶಿಥಿಲಾವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಪರಿಸ್ಥಿತಿ ಕೋರ್ಟ್ ಗೆ ಆಗಮಿಸುವ ಕಕ್ಷಿಗಾರರು ಮತ್ತು ವಕೀಲರಿಗೆ ಅಹಿತಕರವಾಗಿದೆ.

ಇನ್ನು ನ್ಯಾಯಮೂರ್ತಿಗಳಿಗೆ, ಕೋರ್ಟ್ ಸಿಬ್ಬಂ ದಿಗೆ ಒಗ್ಗದ ವಾತಾವರಣವಿದೆ. ಇದರಿಂದ ಕೋರ್ಟ್ ನ ಕೆಲಸಗಳು ಸಮರ್ಪಕವಾಗಿ ನಡೆಸಲು ಕಷ್ಟವಾಗುತ್ತಿದೆ. ಬ್ರಿಟಿಷರು ಭಾರತವನ್ನು ಬಿಟ್ಟು ಹೋದ ಬಳಿಕ ಕೋರ್ಟ್ ಗೆ ಒದಗಿಸಬೇಕಿದ್ದ ಮೂಲಭೂತ ವ್ಯವಸ್ಥೆಗಳನ್ನು ಕಡೆಗಣಿಸಲಾಗಿದೆ ಎಂದರು.

ರಾಷ್ಟ್ರೀಯ ನ್ಯಾ ಯಾಂಗ ಪೂರ್ವರಚನೆ ನಿಗಮ(ಎನ್ಜೆಐಸಿ)ಕ್ಕೆ ಒತ್ತು ನೀಡಲು ಇದೇ ಕಾರಣವಾಗಿದೆ. ರಾಷ್ಟ್ರೀ ಯ ನ್ಯಾ ಯಾಲಯ ಅಭಿವೃದ್ಧಿ ಯೋಜನೆಯ ಪರಿಕಲ್ಪ ನೆಗಳ ಅಭಿವೃದ್ಧಿ ಮತ್ತು ಅನುಷ್ಠಾನಕ್ಕೆ ತರುವ ಕೆಲಸವನ್ನು ಎನ್ಜೆಐಸಿ ನಿರ್ವಹಿಸಲಿದೆ ಎಂದು ಸಿಜೆಐ ರಮಣ ತಿಳಿಸಿದರು.

ಇದೇ ವೇಳೆ, ಪ್ರಧಾನಿ ಇಂದಿರಾ ಗಾಂಧಿಯವರನ್ನು ಅನರ್ಹಗೊಳಿಸಿದ ಅಲಹಾಬಾದ್ ಹೈಕೋರ್ಟ್ ನ 1975ರ ತೀರ್ಪು ನ್ಯಾಯಾಂಗ ಇತಿಹಾಸದಲ್ಲೇ ‘ಮಹಾ ಧೈರ್ಯದ ತೀರ್ಪು’ ಎಂದು ರಮಣ
ವ್ಯಾಖ್ಯಾನಿಸಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ